‘ಧೂಮಪಾನ ನಿಷೇಧ ಮಸೂದೆ ಹಿಂತೆಗೆದುಕೊಳ್ಳಲಾಗುವುದು’
ಮಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ನಿರ್ಧಾರವನ್ನು ಕೈ ಬಿಡುವುದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಮಗೆ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಹೇಳಿದ್ದಾರೆ.
ದೆಹಲಿಯಿಂದ ವಾಪಾಸಾದ ಪೂಜಾರಿ ಅವರ ಬಳಿ ಬೀಡಿ ಕಾರ್ಮಿಕರು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಷೇಧವನ್ನು ವಿರೋಧಿಸಿ ಮನವಿ ಸಲ್ಲಿಸಿದ್ದರು. ಈ ಕುರಿತು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಬಳಿ ಪೂಜಾರಿ ಅವರು ಮಾತನಾಡಿದ್ದು, ಧೂಮಪಾನ ನಿಷೇಧದ ನಿರ್ಧಾರವನ್ನು ಕೈ ಬಿಡಲಾಗುವುದು ಎಂದು ಕೃಷ್ಣ ತಮಗೆ ಭರವಸೆ ನೀಡಿರುವುದಾಗಿ ಪೂಜಾರಿ ಹೇಳಿದರು.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪೂಜಾರಿ, ಧೂಮಪಾನ ನಿಷೇಧ ಮಸೂದೆಯನ್ನು ಜಾರಿಗೆ ತರುವುದಿಲ್ಲ , ಅಲ್ಲದೆ ಯಾವ ಬೆಲೆಯನ್ನಾದರೂ ತೆತ್ತು ಬೀಡಿ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದಾಗಿ ಮುಖ್ಯಮಂತ್ರಿಗಳು ತಮಗೆ ಮಾತುಕೊಟ್ಟಿದ್ದಾರೆ ಎಂದರು.
ಧೂಮಪಾನ ನಿಷೇಧ ಮಸೂದೆಯ ಬಗ್ಗೆ ಬೀಡಿ ಕಾರ್ಮಿಕರ ವಿರೋಧ ಅರ್ಥವಾಗುತ್ತದೆ. ಆದರೆ, ಹಲವು ದಶಕಗಳ ಹಿಂದೆಯೇ ಸಿನೆಮಾ ಥಿಯೇಟರ್ ಮತ್ತು ಸರಕಾರೀ ಕಚೇರಿಗಳಲ್ಲಿ ಧೂಮಪಾನವನ್ನು ನಿಷೇಧಿಸಲಾಗಿದೆ. ಪ್ರಸ್ತುತ ಮಸೂದೆಯ ಬಗ್ಗೆ ಬೀಡಿ ಕಾರ್ಮಿಕರು ಧೃತಿಗೆಡುವ ಅಗತ್ಯವಿಲ್ಲ ಎಂದು ಪೂಜಾರಿ ಬೀಡಿ ಕಾರ್ಮಿಕರಿಗೆ ಸಮಾಧಾನ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications