ಪಾತಾಳಕ್ಕಿಳಿದ ಅಡಿಕೆ ದರ, ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆ ಬಂದ್
ಶಿವಮೊಗ್ಗ : ಜಿಲ್ಲೆಯ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಅಡಿಕೆ ವ್ಯಾಪಾರ ವಹಿವಾಟನ್ನು ಬುಧವಾರ ಬೆಳಗ್ಗೆಯಿಂದ ಸ್ಥಗಿತಗೊಳಿಸಲಾಗಿದೆ.
ಈ ತಿಂಗಳ ಅಂತ್ಯದವರೆಗೆ ಅಡಿಕೆ ವ್ಯಾಪಾರ ವಹಿವಾಟನ್ನು ಮುಚ್ಚಲು ಅಡಿಕೆ ವರ್ತಕರ ಸಂಘ ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಭೂಪಾಳಂ ಸತ್ಯನಾರಾಯಣ ತಿಳಿಸಿದ್ದಾರೆ. ಕಳೆದ ಹತ್ತು ದಿನಗಳಿಂದ ಅಡಿಕೆ ಧಾರಣೆ ಕುಸಿಯುತ್ತಲೇ ಬಂದಿದ್ದು , ಮಂಗಳವಾರದ ಹೊತ್ತಿಗೆ ಅಡಿಕೆ ದರ ಪಾತಾಳಕ್ಕಿಳಿದಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಂತ್ಯದವರೆಗೆ ಅಡಿಕೆ ವ್ಯಾಪಾರವನ್ನು ಮುಚ್ಚಲು ನಿರ್ಧರಿಸಲಾಗಿದೆ.
ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಕಡಿಮೆಯಾಗಿರುವುದು ಬೆಲೆ ಕುಸಿತಕ್ಕೆ ಕಾರಣವಾದರೂ, ಆಂತರಿಕ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅನಪೇಕ್ಷಿತ ಸ್ಪರ್ಧೆಗಳು ಕೂಡ ವಿಪರೀತ ಬೆಲೆ ಕುಸಿತದ ಹಿಂದಿರುವ ಕಾರಣ ಎನ್ನಲಾಗಿದೆ. ಈ ವ್ಯಾಪಾರ ವಹಿವಾಟು ಸ್ಥಗಿತ, ಅಡಿಕೆ ವ್ಯಾಪಾರಕ್ಕೆ ಮಾತ್ರ ಸೀಮಿತವಾಗಿದ್ದು ಕಮಿಷನ್ ಮಂಡಿಗಳು ರೈತರೊಡನೆ ಎಂದಿನಂತೆ ತಮ್ಮ ಹಣಕಾಸಿನ ವಹಿವಾಟನ್ನು ನಡೆಸಲಿದ್ದಾರೆ ಎಂದು ಸತ್ಯನಾರಾಯಣ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications