ಓ.ಎಫ್.ಸಿ. ಘಟಕ ಸೇರಿದಂತೆ 7 ಕೈಗಾರಿಕೆ ಸ್ಥಾಪನೆಗೆಸರ್ಕಾರದ ಸಮ್ಮತಿ
ಬೆಂಗಳೂರು : ಐದು ದಶಲಕ್ಷ ಕಿ.ಮೀಟರ್ ಆಪ್ಟಿಕ್ ಫೈಬರ್ ಕೇಬಲ್ ಅಳವಡಿಸುವ ಸಾಮರ್ಥ್ಯದ ಓಎಫ್‌ಸಿ ಘಟಕವೂ ಸೇರಿದಂತೆ ಸುಮಾರು 3,429.50 ಕೋಟಿ ರುಪಾಯಿ ಬಂಡವಾಳದಲ್ಲಿ ಏಳು ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ.ಈ ವಿಷಯವನ್ನು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. 1,000 ಕೋಟಿ ರುಪಾಯಿ ಬಂಡವಾಳದ ಸ್ಟರ್‌ಲೈಟ್ ಆಪ್ಟಿಕಲ್ ಟೆಕ್ನಾಲಜಿ ಕಂಪನಿ, ಸಾವಿರದ ಹನ್ನೆರಡು ಕೋಟಿ ರು. ಬಂಡವಾಳದ ಇಂಡ್ -ಯುರೋಫಾರ್ಮಾ, 690 ಕೋಟಿ ರುಪಾಯಿ ಬಂಡವಾಳ ಹೂಡಿಕೆಯ ವಿಕಾಸ್ ಟೆಲಿಕಾಂ, 350 ಕೋಟಿ ರುಪಾಯಿ ಬಂಡವಾಳದ ರಿಲಯನ್ಸ್ ಕಮ್ಯೂನಿಕೇಷನ್ಸ್, 150.40 ಕೋಟಿ ರುಪಾಯಿ ಬಂಡವಾಳದ ಫಿಯೋನಿಕ್ಸ್ ಗ್ಲೋಬಲ್ ಸಲ್ಯೂಷನ್ಸ್, 141.60 ಕೋಟಿ ರುಪಾಯಿಗಳ ಮದರ್ ಡೇರಿ ಹಣ್ಣು ಮತ್ತು ತರಕಾರಿ ಘಟಕ, 85 ಕೋಟಿ ರುಪಾಯಿ ಬಂಡವಾಳ ಹೂಡಿಕೆಯ ಸುಭಾಷ್ ಕಬಿನಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸಲು ಆಗಸ್ಟ್ 14ರಂದು ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ದೇಶಪಾಂಡೆ ಹೇಳಿದ್ದಾರೆ.
11 ಸಾವಿರ ಉದ್ಯೋಗ : ಈ ಏಳು ಕೈಗಾರಿಕೆಗಳಿಂದಾಗಿ ಸುಮಾರು 11ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರಕಲಿದೆ. ಸ್ಟರ್‌ಲೈಟ್ ಆಫ್ಟಿಕಲ್ ಕಂಪನಿಯು ಸೆಪ್ಟೆಂಬರ್ ತಿಂಗಳಿನಿಂದಲೇ ಮೊದಲ ಹಂತದ ಕಾಮಗಾರಿ ಆರಂಭಿಸಲಿದೆ ಎಂದೂ ಸಚಿವರು ವಿವರಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications