ಶೀಘ್ರವೇ ಖಾಸಗಿ ಎಫ್.ಎಂ.ನಲ್ಲಿ ಮೊಳಗಲಿವೆ ಕನ್ನಡ ಗೀತೆಗಳು
ಬೆಂಗಳೂರು : ರಾಷ್ಟ್ರದ ಪ್ರಪ್ರಥಮ ಖಾಸಗಿ ರೇಡಿಯೋ ಚಾನೆಲ್ ಶನಿವಾರ ಕನ್ನಡದ ಹೆಸರಾಂತ ನಾಯಕ ನಟ ಶಿವರಾಜ್‌ಕುಮಾರ್ ಅವರ ಸಂದರ್ಶನ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದೆ. ಈ ಮೂಲಕ ಕನ್ನಡ ಕಾರ್ಯಕ್ರಮ ಪ್ರಸಾರಕ್ಕೆ ಅದು ಚಾಲನೆ ನೀಡಲಿದೆ.
ಕೆಲವೇ ದಿನಗಳಲ್ಲಿ ಕನ್ನಡ ಚಿತ್ರಗೀತೆಗಳು, ಸಂಗೀತ, ಭಾವಗೀತೆಗಳು ಸಹ ರೇಡಿಯೋ ಸಿಟಿಯಲ್ಲಿ ಮೊಳಗಲಿವೆ. ಕನ್ನಡ ಕಾರ್ಯಕ್ರಮಗಳನ್ನು ಬಿತ್ತರಿಸಲು ಪ್ರಯತ್ನ ನಡೆಸುತ್ತಿರುವುದಾಗಿ ಸ್ಟಾರ್ ರೇಡಿಯೋ ಸಿಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಾನ್ ಕ್ಯಾಟ್‌ಲೆಟ್ ಹಾಗೂ ಕಾರ್ಯಕ್ರಮ ನಿರ್ದೇಶಕ ವೇಲು ಶಂಕರ್ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಸ್ತುತ ದಿನದ 24 ಗಂಟೆಗಳ ಕಾಲವೂ ಹಿಂದಿ ಹಾಗೂ ಇಂಗ್ಲಿಷ್ ಸಂಗೀತ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ರೇಡಿಯೋ ಸಿಟಿ ಕನ್ನಡಕ್ಕಾಗಿ ದಿನದಲ್ಲಿ ಇಂತಿಷ್ಟು ಸಮಯ ಎಂದು ನಿಗದಿ ಮಾಡಿಲ್ಲ ಎಂದು ಅವರು ಹೇಳಿದರು. ಕನ್ನಡ ಸಂಗೀತ ಪ್ರಸಾರ ಮಾಡಲು ಆಡಿಯೋ ಕ್ಯಾಸೆಟ್ ಕಂಪನಿಗಳ ಜತೆ ಕಾಪಿರೈಟ್‌ಗೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿರುವುದಾಗಿಯೂ ಹೇಳಿದರು.
ರೇಡಿಯೋ ಸಿಟಿ 91 ಎಫ್.ಎಂ.ನಲ್ಲಿ ಹೊಸ ಕನ್ನಡ ಚಿತ್ರಗೀತೆಗಳು ಪ್ರಸಾರವಾದರೆ, ಸೀಮಿತ ಮಾರುಕಟ್ಟೆಯ ಕಾರಣ ತಮ್ಮ ಕ್ಯಾಸೆಟ್ ಹಾಗೂ ಸಿ.ಡಿ.ಗಳು ಮಾರಾಟವಾಗುವುದು ಕಷ್ಟ ಎಂದು ಆಡಿಯೋ ಕ್ಯಾಸೆಟ್ ಕಂಪನಿಗಳು ಹಿಂಜರಿಯುತ್ತಿವೆ. ಹೀಗಾಗಿ ಇಲ್ಲಿ ತಾಂತ್ರಿಕ ತೊಂದರೆ ಎದುರಾಗಿದೆ ಎಂದರು.
ಕಳೆದ ವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರೂ ಸೇರಿದಂತೆ ಹಲವು ಕನ್ನಡ ಪರ ಹೋರಾಟಗಾರರು, ಕನ್ನಡ ಸಂಘಟನೆಗಳು ಎಫ್.ಎಂ. ಚಾನೆಲ್‌ನಲ್ಲಿ ಕನ್ನಡ ಕಾರ್ಯಕ್ರಮ ಪ್ರಸಾರ ಮಾಡದಿದ್ದರೆ, ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications