ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲೂ ಐ.ಟಿ. ಕೇಂದ್ರ: ಕೃಷ್ಣ
ಬೆಂಗಳೂರು : ಅರಮನೆಗಳ ನಗರಿ ಮೈಸೂರು, ಅವಳಿ ನಗರ ಹುಬ್ಬಳ್ಳಿ - ಧಾರವಾಡ ಹಾಗೂ ಬಂದರು ನಗರಿ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಹೆಚ್ಚಿನ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಿಸಲುದ್ದೇಶಿಸಿರುವ ದಿವ್ಯಶ್ರೀ ಟವರ್ಸ್‌ನ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದ ಅವರು, ಹುಬ್ಬಳ್ಳಿಗೆ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಇನ್‌ಫೋಸಿಸ್ ಉದ್ದೇಶಿಸಿದೆ. ಕೇವಲ ಬೆಂಗಳೂರಷ್ಟೇ ಅಲ್ಲದೆ ರಾಜ್ಯದ ಇತರ ನಗರಗಳಿಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಿಸುವ ಉದ್ದೇಶ ತಮ್ಮದಾಗಿದೆ ಎಂದರು.
ಸರಕಾರ ಹಾಗೂ ನಗರ ಪಾಲಿಕೆಗಳು ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಖಾಸಗಿಯವರ ಸಹಭಾಗಿತ್ವ ಸೂಕ್ತ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ದೊರಕದೇ ಹೋದರೆ ಗುರಿಸಾಧನೆಯಲ್ಲಿ ಅಡ್ಡಿ ಆತಂಕಗಳು ಬರುತ್ತವೆ ಎಂದು ಅವರು ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನಗರಗಳ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುವುದೆಂದರು.
ಸಮಾರಂಭದಲ್ಲಿ ಯೋಜನಾ ಫಲಕ ಅನಾವರಣಗೊಳಿಸದ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಅವರು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೂತನ ಕೈಗಾರಿಕಾ ನೀತಿಯಡಿಯಲ್ಲಿ ಹೆಚ್ಚಿನ ಆದ್ಯತೆ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ರಾಮಲಿಂಗಾರೆಡ್ಡಿ, ಮೇಯರ್ ಪ್ರೇಮಾ ಕಾರ್ಯಪ್ಪ, ಶ್ಯಾಮರಾಜ್ ಮತ್ತಿತರರು ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications