ಯು.ಆರ್. ರಾವ್ಗೆ ನ್ಯಾಷನಲ್ ಇಂಜಿನಿಯರಿಂಗ್ ಅಕಾಡೆಮಿ ಪ್ರಶಸ್ತಿ
ಬೆಂಗಳೂರು : ಬಾಹ್ಯಾಕಾಶ ಆಯೋಗದ ಮಾಜಿ ಅಧ್ಯಕ್ಷ ಪ್ರೊ. ಯು. ಆರ್. ರಾವ್ ಅವರು ಇಂಜಿನಿಯರಿಂಗ್ ಕ್ಷೇತ್ರಕ್ಕೆ ತಮ್ಮ ಜೀವನಾದ್ಯಂತ ಸಲ್ಲಿಸಿದ ಕೊಡುಗೆಯನ್ನು ಮನ್ನಿಸಿ ‘ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್’ ಅವರನ್ನು ಪುರಸ್ಕರಿಸಲಿದೆ.
ಇಂಜಿನಿಯರಿಂಗ್ ಅಧ್ಯಯನ, ಇಂಜಿನಿಯರಿಂಗ್ ಶಿಕ್ಷಣ ಅಥವಾ ಇಂಜಿನಿಯರಿಂಗ್ ಕ್ಷೇತ್ರದ ತಾಂತ್ರಿಕ ನಿರ್ವಹಣೆಯಲ್ಲಿನ ಸಾಧನೆಗಾಗಿ ಈ ಪ್ರಶಸ್ತಿಯನ್ನು ನ್ಯಾಷನಲ್ಅಕಾಡೆಮಿಯು ನೀಡುತ್ತಾ ಬಂದಿದೆ. ಪ್ರಸ್ತುತ ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಗೆ ಶ್ರಮಿಸಿದ ಯು. ಆರ್ ರಾವ್ ಅವರ ಸಾಧನೆಯನ್ನು ಗುರುತಿಸಿ ಈ ಮನ್ನಣೆ ನೀಡಲಾಗುತ್ತಿದೆ. ಶುಕ್ರವಾರದ ಇಸ್ರೋ ಪ್ರಕಟಣೆ ಈ ವಿಷಯವನ್ನು ತಿಳಿಸಿದ್ದು ಈ ಪುರಸ್ಕಾರಕ್ಕೆ ಪಾತ್ರರಾಗಿರುವ 9ನೇ ವ್ಯಕ್ತಿ ಯು.ಆರ್. ರಾವ್ ಎಂದು ಹೇಳಿದೆ.
ಪ್ರಶಸ್ತಿಯನ್ನು ಡಿಸೆಂಬರ್ 28ರಂದು ನಡೆವ ನ್ಯಾಷನಲ್ ಅಕಾಡೆಮಿಯ ವಾರ್ಷಿಕ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು.
ಈ ಹಿಂದೆ ಡಾ. ಅಬುಲ್ ಕಲಮ್, ಸತೀಶ್ ಧವನ್, ಪ್ರೊ. ಜೈ ಕೃಷ್ಣ , ಡಾ. ಎ. ರಾಮಚಂದ್ರನ್ , ಡಾ. ಹೋಮಿ ಸೇತ್ನಾ ಈ ಪ್ರಶಸ್ತಿ ಪಾತ್ರರಾಗಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications