ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಬಾಹ್ಯಾಕಾಶ ವಿಜ್ಞಾನ ಕೋರ್ಸು
ಬೆಂಗಳೂರು : ನಗರದ ಸೈಂಟ್ಜೋಸೆಫ್ ಕಾಲೇಜು, ಇಸ್ರೋದ ಸಹಯೋಗದೊಂದಿಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಡಿಪ್ಲೊಮಾ ಪದವಿ ತರಗತಿಗಳನ್ನು ಆರಂಭಿಸಿದೆ.
ಇಸ್ರೋ ಆಧ್ಯಕ್ಷ ಡಾ. ಕೆ. ಕಸ್ತೂರಿ ರಂಗನ್ ಶನಿವಾರ ಈ ಹೊಸ ಕೋರ್ಸನ್ನು ಉದ್ಘಾಟಿಸಿದರು. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೆ. ನಾಗರಾಜನ್, ಹೊಸ ಪದವಿ ತರಗತಿಗೆ ಈಗಾಗಲೇ 250 ಅರ್ಜಿಗಳು ಬಂದಿವೆ. ಅವುಗಳಲ್ಲಿ 44 ವಿದ್ಯಾರ್ಥಿಗಳನ್ನು ಪದವಿ ತರಗತಿಗೆ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ವಿದ್ಯಾರ್ಥಿಗಳಲ್ಲಿದ್ದ ಆಸಕ್ತಿಯನ್ನು ಗುರುತಿಸಿ, ಪಿಯುಸಿ ಮತ್ತು ಇಂಜಿನಿಯರಿಂಗ್ ಪದವೀಧರರನ್ನೂ ಕೋರ್ಸಿಗೆ ಆಯ್ಕೆ ಮಾಡಲಾಗಿದೆ.
ಫೆಬ್ರವರಿ ಕೊನೇ ವಾರದಲ್ಲಿ ಕೋರ್ಸು ಮುಕ್ತಾಯವಾಗಲಿದೆಯಾದ್ದರಿಂದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಪರೀಕ್ಷೆ ಬರೆಯಲು ತೊಂದರೆಯಿರುವುದಿಲ್ಲ. ಬಾಹ್ಯಾಕಾಶ ವಿಜ್ಞಾನ ತರಗತಿ ಶನಿವಾರ ಮತ್ತು ಭಾನುವಾರ ನಡೆಯುತ್ತದೆ. ತರಗತಿಯ ಹೊರತಾಗಿ ವಿದ್ಯಾರ್ಥಿಗಳು ಕೋರ್ಸ್ ಅವಧಿಯಲ್ಲಿ ಪ್ರೊಜೆಕ್ಟ್ ಒಂದನ್ನು ಮಾಡಬೇಕಾಗುತ್ತದೆ.
ರಾಮನ್ ರಿಸರ್ಚ್ ಸಂಸ್ಥೆಯ ಡಾ. ಜಿ. ಶ್ರೀನಿವಾಸನ್ ಅವರ ಕೋರ್ಸನ್ನು ನಿರ್ವಹಿಸಲಿದ್ದಾರೆ. ಇಸ್ರೋ ಹಾಗೂ ರಾಮನ್ ರಿಸರ್ಚ್ ಸಂಸ್ಥೆಗಳ ವಿಜ್ಞಾನಿಗಳು ಮತ್ತು ಇಂಜಿನಿಯರ್ಗಳು ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಕೋರ್ಸ್ನ ಶುಲ್ಕ 1,000 ರೂಪಾಯಿ. ಈ ಕೋರ್ಸಿಗೆ ವಿಶ್ವವಿದ್ಯಾಲಯದ ಮಾನ್ಯತೆ ಇರುವುದಿಲ್ಲ. ಆದರೆ ಇಸ್ರೋ ಮತ್ತು ಕಾಲೇಜು ಸಂಯುಕ್ತವಾಗಿ ಡಿಪ್ಲೊಮಾ ಸರ್ಟಿಫಿಕೇಟ್ ನೀಡಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications