ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಟರ್‌ನೆಟ್‌ ಮೂಲಕ ವಾಹನ ನೊಂದಣಿ ಸರ್ಕಾರದ ಚಿಂತನೆ

By Staff
|
Google Oneindia Kannada News

ಬೆಂಗಳೂರು : ಮೋಟಾರು ವಾಹನಗಳ ರಿಜಿಸ್ಟ್ರೇಷನ್‌, ವಿಳಾಸ ಬದಲಾವಣೆಯೇ ಮೊದಲಾದ ಸೇವೆಗಳನ್ನು ಇಂಟರ್‌ನೆಟ್‌ ಮೂಲಕ ಒದಗಿಸುವ ಬಗ್ಗೆ ಕರ್ನಾಟಕ ರಾಜ್ಯ ಸರಕಾರ ಚಿಂತಿಸುತ್ತಿದೆ. ಈ ವಿಷಯವನ್ನು ರಾಜ್ಯದ ಸಾರಿಗೆ ಸಚಿವ ಸಗೀರ್‌ ಅಹ್ಮದ್‌ ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಈಗಾಗಲೇ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಅದೇ ವ್ಯವಸ್ಥೆಯನ್ನು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿರುವ ರಾಜ್ಯದಲ್ಲೂ ಅನುಷ್ಠಾನಕ್ಕೆ ತರುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು. ಈ ಸಂಬಂಧ ಪರಿಶೀಲನೆಗಾಗಿ ಆ.25ರಂದು ಗುಜರಾತ್‌ಗೆ ತಾವೇ ಹೋಗುತ್ತಿರುವುದಾಗಿಯೂ ಸಚಿವರು ಹೇಳಿದರು.

ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದು, ಎಲ್ಲೆಡೆ ಸ್ಮಾರ್ಟ್‌ಕಾರ್ಡ್‌ ವ್ಯವಸ್ಥೆ ಜಾರಿಗೊಳಿಸಲಾಗುವುದು. ವಾಹನಗಳ ಹೆಚ್ಚಳದಿಂದ ಬೆಂಗಳೂರಿನಲ್ಲಿ ನಾಗರಿಕರಿಗೆ ಆಗುತ್ತಿರುವ ಅನನುಕೂಲ ತಪ್ಪಿಸಲು ಇನ್ನೂ ಎರಡು ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X