ರಾಣೆಬೆನ್ನೂರಿನ ಬೃಹತ್ ಬಸ್ ನಿಲ್ದಾಣಕ್ಕೆ ಶೀಘ್ರವೇ ಶಂಕುಸ್ಥಾಪನೆ
ಬೆಂಗಳೂರು : 65 ಲಕ್ಷ ರುಪಾಯಿ ವೆಚ್ಚದಲ್ಲಿ ರಾಣೆಬೆನ್ನೂರಿನಲ್ಲಿ ಬೃಹತ್ ಬಸ್ ನಿಲ್ದಾಣ ನಿರ್ಮಿಸಲು ಸರಕಾರ ಉದ್ದೇಶಿಸಿದ್ದು, ಒಂದು ವಾರದೊಳಗೆ ಅದರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ಸಗೀರ್ ಅಹ್ಮದ್ ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ 45 ಲಕ್ಷ ರುಪಾಯಿ ವೆಚ್ಚದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ನಿರ್ಮಿಸಲೂ ಉದ್ದೇಶಿಸಲಾಗಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಚಿವರು ಹೇಳಿದರು. ನಿರ್ಮಾಣ, ನಿರ್ವಹಣೆ ವರ್ಗಾವಣೆ (ಬಿ.ಟಿ.ಓ) ಆಧಾರದ ಮೇಲೆ ರಾಜ್ಯದಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸಲು ಶೀಘ್ರವೇ ಟೆಂಡರ್ ಕರೆಯಲಾಗುವುದು.
ಪ್ರತಿಯಾಂದು ತಾಲೂಕು ಕೇಂದ್ರದಲ್ಲೂ ಬಸ್ ನಿಲ್ದಾಣ ನಿರ್ಮಿಸುವ ಸಲುವಾಗಿ ಈ ಯೋಜನೆ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆಯ ಅನುಕೂಲಕ್ಕಾಗಿ ಖಾಸಗಿಯವರಿಂದ ಬಸ್ಗಳನ್ನು ಗುತ್ತಿಗೆ ಪಡೆದಿರುವಂತೆಯೇ ಈಶಾನ್ಯ ಸಾರಿಗೆ ಸಂಸ್ಥೆಯಲ್ಲೂ ಕಿಲೋ ಮೀಟರ್ಗೆ ರುಪಾಯಿ 10.10ರಂತೆ 200 ಬಸ್ಗಳನ್ನು ಗುತ್ತಿಗೆ ಪಡೆಯಲಾಗುತ್ತಿದೆ. ವಾಯವ್ಯ ಸಾರಿಗೆಯಲ್ಲೂ ಬಸ್ ಗುತ್ತಿಗೆ ಪಡೆಯಲು ಚಿಂತಿಸಲಾಗುತ್ತಿದೆ ಎಂದರು.
ಮೆಟ್ರೋ ಬಸ್ : ಬೆಂಗಳೂರಿನಲ್ಲಿ ಮೆಟ್ರೋ ಬಸ್ ಸಂಚಾರ ಆರಂಭಿಸಲು ಸ್ವೀಡನ್ ಸರಕಾರ ಹಾಗೂ ರಾಜ್ಯ ಸರಕಾರದ ನಡುವೆ ಪತ್ರವ್ಯವಹಾರ ನಡೆದಿದ್ದು, ಅಧಿಕೃತ ಪ್ರಕಟಣೆಯ ಸಮಯಕ್ಕಾಗಿ ಕಾಯುತ್ತಿದ್ದೇವೆ ಎಂದೂ ಸಚಿವರು ತಿಳಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications