ಮುತ್ತತ್ತಿ ಅರಣ್ಯದಲ್ಲಿ ವೀರಪ್ಪನ್ ಶಂಕೆ : ಪೊಲೀಸರ ಕಟ್ಟೆಚ್ಚರ
ಚಾಮರಾಜನಗರ : ಕುಖ್ಯಾತ ಕಾಡುಗಳ್ಳ, ನರಹಂತಕ ವೀರಪ್ಪನ್ ಈಹೊತ್ತು ಮಂಡ್ಯಜಿಲ್ಲೆಯ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿದ್ದಾನೆ ಎಂಬ ವದಂತಿಗಳು ಹಬ್ಬಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮಳವಳ್ಳಿ, ಹಲಗೂರು ಹಾಗೂ ಭಾರತೀನಗರ ರಾಣೆಯ ಪೊಲೀಸ್ ಸಿಬ್ಬಂದಿಯನ್ನೂ ಅರಣ್ಯಕ್ಕೆ ಕಳುಹಿಸಲಾಗಿದೆ ಎಂಬ ವರ್ತಮಾನ ಬಂದಿದೆ.
ಈ ಮಧ್ಯೆ ವೀರಪ್ಪನ್ ಹಾಗೂ ಆತನ ಸಹಚರರನ್ನು ಬಂಧಿಸಲು ನೇಮಿಸಲಾಗಿರುವ ಐ.ಪಿ.ಎಸ್. ಕೆಂಪಯ್ಯ ನೇತೃತ್ವದ ಕಾರ್ಯಪಡೆ ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ಸತ್ಯಮಂಗಲದಿಂದ ಮೆಟ್ಟೂರಿನವರೆಗೆ ತೀವ್ರ ಸಂಚಾರ ನಡೆಸಿ, ಕುತೂಹಲ ಕೆರಳಿಸಿದೆ.
ಈ ದಿಢೀರ್ ಕಾರ್ಯಾಚರಣೆ ನಾನಾ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ, ವೀರಪ್ಪನ್ ಸತ್ಯಮಂಗಲದಲ್ಲಿದ್ದಾನೋ, ಮುತ್ತತ್ತಿಯಲ್ಲಿದ್ದಾನೋ ಅಥವಾ ಮಲೆ ಮಹದೇಶ್ವರ ಬೆಟ್ಟದಲ್ಲೇ ಅಡಗಿದ್ದಾನೆ ಎಂಬುದು ನಿಗೂಢವಾಗಿದೆ.
ಆದರೆ, ಮಹದೇಶ್ವರ ಬೆಟ್ಟದಿಂದ ಉತ್ತರ ದಿಕ್ಕಿನ ಅರಣ್ಯಕ್ಕೆ ವೀರಪ್ಪನ್ ಹಾಗೂ ಆತನ ಸಹಚರರು ಹೋಗಿರುವ ಬಗ್ಗೆ ಖಚಿತ ವರ್ತಮಾನ ದೊರೆತಿರುವ ಹಿನ್ನೆಲೆಯಲ್ಲಿ ಕೆಂಪಯ್ಯ ಅವರ ನೇತೃತ್ವದ ಕಾರ್ಯಪಡೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅರಣ್ಯ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications