ವೇಶ್ಯೆಯರ ಆಮಿಷ : ಸೇನೆಯಿಂದ ತೆಹಲ್ಕಾಹಗರಣದ ಮರು ವಿಚಾರಣೆ?
ನವದೆಹಲಿ : ಲಂಚ ಹಗರಣ ಬಯಲು ಮಾಡುವ ನಿಟ್ಟಿನಲ್ಲಿ ಸೇನಾಧಿಕಾರಿಗಳಿಗೆ ವೇಶ್ಯೆಯರ ಆಮಿಷ ಒಡ್ಡಲಾಗಿದೆ ಎಂಬ ಹೊಸ ವಿಷಯ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಇಡೀ ತೆಹಲ್ಕಾ ಹಗರಣದ ಬಗ್ಗೆ ಸೇನೆಯೂ ಮರು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಸೇನಾ ಮೂಲಗಳಿಂದ ತಿಳಿದುಬಂದಿದೆ.
ಈಗಾಗಲೇ ತೆಹಲ್ಕಾ ಹಗರಣದ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ವೆಂಕಟಸ್ವಾಮಿ ಆಯೋಗ ಕೂಡ ಪತ್ರಿಕೆಗಳಲ್ಲಿ ವರದಿಯಾಗಿರುವ ಈ ಹೊಸ ವಿಷಯದ ಬಗ್ಗೆ ಗುರುವಾರ ವಿಚಾರಣೆ ನಡೆಸಲಿದೆ ಎಂದು ಆಯೋಗದ ವಕ್ತಾರರ ಆನಂದ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಭೆ : ತೆಹಲ್ಕಾ ಭ್ರಷ್ಟಾಚಾರ ಬಯಲಿಗೆಳೆಯುವ ಹೆಸರಿನಲ್ಲಿ ಸೇನಾಧಿಕಾರಿಗಳಿಗೆ ವೇಶ್ಯೆಯರ ಆಮಿಷ ಒಡ್ಡುವ ಮೂಲಕ ದೇಶದ್ರೋಹವೆಸಗಿದೆ ಎಂದು ಆರೋಪಿಸಿ, ಬುಧವಾರ ಸುಗಮ ಕಲಾಪಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಸುಗಮವಾಗಿ ಸಂಸತ್ ಕಲಾಪ ನಡೆಸುವ ಉದ್ದೇಶದಿಂದ ಲೋಕಸಭಾಧ್ಯಕ್ಷ ಜಿ.ಎಂ.ಸಿ. ಬಾಲಯೋಗಿ ಅವರು ಸರ್ವಪಕ್ಷ ನಾಯಕರ ಸಭೆಯನ್ನು ಗುರುವಾರ ಕರೆದಿದ್ದಾರೆ. ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications