ಮಂಗಳೂರಲ್ಲಿ ಮಹಿಳೆಯರಿಗಾಗಿ ಕಂಪ್ಯೂಟರ್ ಹಾರ್ಡ್ವೇರ್ ತರಪೇತಿ
ಮಂಗಳೂರು : ಕರ್ನಾಟಕ ಪ್ರಾದೇಶಿಕ ವಿಜ್ಞಾನ ಮತ್ತು ತಂತ್ರಜ್ಞಾನ ಎಂಜಿನಿಯರಿಂಗ್ ಕಾಲೇಜು ಎಂಟರ್ಪ್ರೀನರ್ಸ್ ಪಾರ್ಕ್ (ಕೆಆರ್ಇಸಿ- ಎಸ್ಟಿಇಪಿ), ಮಂಗಳೂರು ಮತ್ತು ಉಡುಪಿ ಜಿಲ್ಲಾ ಕೈಗಾರಿಕೆಗಳ ಕೇಂದ್ರ (ಡಿಐಸಿ) ಸಹಯೋಗದಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಕುರಿತ 21 ದಿನಗಳ ಕೌಶಲ್ಯಾಭಿವೃದ್ಧಿ ತರಪೇತಿ ಆಯೋಜಿಸಿದೆ. ಇದು ಮಹಿಳೆಯರಿಗಾಗಿ ಮಾತ್ರ.
ಆಗಸ್ಟ್ 27ರಿಂದ ಪ್ರಾರಂಭವಾಗಲಿರುವ ಈ ತರಪೇತಿ ಮಹಿಳೆಯರು ಸ್ವ- ಉದ್ಯೋಗಿಗಳಾಗಲು ನೆರವಾಗಲಿದೆ. ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್ಸ್ ಅಥವಾ ಕಂಪ್ಯೂಟರ್ ಸೈನ್ಸ್ - ಈ ಪೈಕಿ ಯಾವುದಾದರೊಂದು ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದಿರುವ 21ರಿಂದ 35 ವರ್ಷ ವಯೋಮಾನದ ಹೆಂಗಸರು ತರಪೇತಿಗೆ ಯೋಗ್ಯರು. ಈ ತರಪೇತಿ ಸಂಪೂರ್ಣ ಉಚಿತ.
ಆಸಕ್ತರು ಈ ವಿಳಾಸಕ್ಕೆ ಅರ್ಜಿ ಗುಜರಾಯಿಸಿರಿ- ನಿರ್ದೇಶಕರು, ಕೆಆರ್ಇಸಿ- ಎಸ್ಟಿಇಪಿ, ಶ್ರೀನಿವಾಸನಗರ ಪೋಸ್ಟ್ ಆಫೀಸ್, ಸೂರತ್ಕಲ್- 574 157. ಅರ್ಜಿ ಹಾಕಲು ಕೊನೆ ದಿನಾಂಕ ಆಗಸ್ಟ್ 25. ಅಥವಾ ಅದೇ ದಿನದಂದು 11 ಗಂಟೆಗೆ ಇದೇ ವಿಳಾಸಕ್ಕೆ ನೇರವಾಗಿ ಸಂದರ್ಶನಕ್ಕೂ ಹೋಗಬಹುದು ಎಂದು ಕೆಆರ್ಇಸಿ- ಎಸ್ಟಿಇಪಿ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications