ಕಾವೇರಿಯಿಂದ 17 ಟಿಎಂಸಿ ನೀರು ಬಿಡುಗಡೆಗೆ ಜಯಲಲಿತಾ ಒತ್ತಾಯ
ಬೆಂಗಳೂರು : ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ಕರ್ನಾಟಕದಿಂದ ತಮಿಳುನಾಡಿಗೆ ಇನ್ನೂ 17 ಟಿ.ಎಂ.ಸಿ. ನೀರು ಬಾಕಿ ಇದ್ದು, ಕುರುವೈ ಬೆಳೆ ರಕ್ಷಣೆಗೆ 10 ದಿನದೊಳಗೆ 17 ಟಿ.ಎಂ.ಸಿ. ನೀರು ಬಿಡುವಂತೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಒತ್ತಾಯಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಈ ಸಂಬಂಧ ಜಯಲಲಿತಾ ಪತ್ರವನ್ನೂ ಬರೆದಿದ್ದಾರೆ. ಪತ್ರ ಗುರುವಾರ ಮುಖ್ಯಮಂತ್ರಿಗಳಿಗೆ ತಲುಪಿದ್ದು, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಈ ಬೇಡಿಕೆಯನ್ನು ಕೃಷ್ಣ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ಗುರುವಾರ ಸಂಜೆ ನಡೆದ ಸಚಿವ ಸಂಪುಟದ ಸಭೆಯಲ್ಲೂ ಈ ವಿಷಯ ಪ್ರಸ್ತಾಪವಾಗಿದ್ದು, ಭೀಕರ ಬರ ಎದುರಿಸುತ್ತಿರುವ ರಾಜ್ಯದ ಜಲಾಶಯಗಳೇ ಒಣಗಿರುವಾಗ ತಮಿಳುನಾಡಿಗೆ ನೀರು ಬಿಡಬಾರದು ಎಂಬ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
28ರಂದು ದೆಹಲಿಗೆ ಕೃಷ್ಣ : ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತರುವಾಯ ಕಾವೇರಿ ನೀರಿಗೆ ಆಗ್ರಹಿಸಿ ಬರೆದಿರುವ ಎರಡನೇ ಪತ್ರ ಇದಾಗಿದೆ. ತಮಿಳುನಾಡು ಸರಕಾರ ಪದೇ ಪದೇ ಕಾವೇರಿ ನೀರಿಗಾಗಿ ಬೇಡಿಕೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನಿ ಅಟಲ್ ಅವರಿಗೆ ವಾಸ್ತವ ಸ್ಥಿತಿ ವಿವರಿಸಲು ಮುಖ್ಯಮಂತ್ರಿ ಕೃಷ್ಣ ಇದೇ 28ರಂದು ದೆಹಲಿಗೆ ತೆರಳುತ್ತಿದ್ದಾರೆ.
ಕಾವೇರಿ ಕಣಿವೆಯಲ್ಲಿರುವ ರಾಜ್ಯದ ಐದು ಜಲಾಶಯಗಳ ಪೈಕಿ ನಾಲ್ಕರಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ರಾಜ್ಯ ಮುಂಗಾರು ಮಳೆ ವೈಫಲ್ಯದಿಂದ ಕಂಗೆಟ್ಟಿದೆ. ಮುಂದೆ ಮಳೆಯಾಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಿದಲ್ಲಿ ತಮಿಳುನಾಡು ಕೋರಿಕೆಯನ್ನು ಈಡೇರಿಸಲಾಗುವುದು ಎಂದು ಕೃಷ್ಣ ಪ್ರಧಾನಿಯವರಿಗೆ ತಿಳಿಸಲಿದ್ದಾರೆ.
ಕಾವೇರಿ ನೀರಿನ ವಿಷಯ ಮತ್ತೆ ವಿವಾದವಾಗಿ ಪರಿಣಮಿಸುವ ಮೊದಲೇ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಕೇರಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವಂತೆ ಕೂಡ ಅವರು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಒತ್ತಾಯಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಜಯಾ ಪತ್ರದ ಸಾರಾಂಶ : ಮೆಟ್ಟೂರು ಜಲಾಶಯದಲ್ಲಿ ಈ ಹೊತ್ತು ಕೇವಲ 55 ಟಿ.ಎಂ.ಸಿ. ನೀರಿದ್ದು, ಇದು ಬೆಳೆದು ನಿಂತಿರುವ ಕುರುವೈ ಬೆಳೆಗೆ ಸಾಕಾಗುವುದಿಲ್ಲ. ಹೀಗಾಗಿ 17 ಟಿ.ಎಂ.ಸಿ. ನೀರನ್ನು ಕೂಡಲೇ ಬಿಡುಗಡೆ ಮಾಡಿ, ಈ ಸಂಬಂಧ ಮಾತುಕತೆ ನಡೆಸಲು ನಮ್ಮ ನೀರಾವರಿ ಸಚಿವರು, ಇಲಾಖೆ ಕಾರ್ಯದರ್ಶಿಗಳನ್ನು ಕರ್ನಾಟಕಕ್ಕೆ ಕಳುಹಿಸಲು ತಮಿಳುನಾಡು ಸರಕಾರ ಇಚ್ಛಿಸಿದ್ದು, ಇದಕ್ಕೆ ದಿನಾಂಕ ನಿಗದಿ ಪಡಿಸಿ ಎಂದೂ ಜಯಾ ತಮ್ಮ ಪತ್ರದಲ್ಲಿ ಕೋರಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications