ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆ ಮೊತ್ತದ ಸ್ಟಾಂಪ್ಪೇಪರ್ಗೆ ಬರ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸ್ಟಾಂಪ್ ಪೇಪರ್ ಬರ ಎದುರಿಸುತ್ತಿದೆ. ಉಕ್ಕಿನ ನಗರಿ ಭದ್ರಾವತಿಯಲ್ಲಿರುವ ಸ್ಟಾಂಪ್ ವೆಂಡರ್ಗಳು ಸಲ್ಲಿಸಿದ ಮನವಿ ಪತ್ರದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೆರಡು ತಿಂಗಳುಗಳಿಂದ 1 ರಿಂದ 5 ಮತ್ತು 10, 20 ರುಪಾಯಿಗಳ ಸ್ಟಾಂಪ್ಪೇಪರ್ ಮತ್ತು ಕೋರ್ಟ್ ಫೀ ಸ್ಟಾಂಪ್ ದೊರಕದ ಸ್ಥಿತಿ ನಿರ್ಮಾಣವಾಗಿದೆ.
ಸಣ್ಣ ಪುಟ್ಟ ವ್ಯವಹಾರ - ಒಪ್ಪಂದಗಳಿಗೆ ಅಲ್ಪ ಮೊತ್ತದ ಸ್ಟಾಂಪ್ ಪೇಪರ್ಗಳು ದೊರಕದೆ ನಾಗರಿಕರು, ಕನಿಷ್ಠ 50 ಇಲ್ಲವೇ 100 ರುಪಾಯಿಗಳ ಸ್ಟಾಂಪ್ ಪೇಪರ್ ಖರೀದಿಸುವ ಪರಿಸ್ಥಿತಿ ಇದೆ. ಈ ವಿಷಯವನ್ನು ವಿಧಾನ ಪರಿಷತ್ ಸದಸ್ಯ ಡಿ.ಎಚ್. ಶಂಕರಮೂರ್ತಿ ಅವರು ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಮನೆ ಬಾಡಿಗೆ ಕರಾರು ಇತ್ಯಾದಿ ವ್ಯವಹಾರಗಳಿಗೆ 10, 20 ರುಪಾಯಿ ಸ್ಟಾಂಪ್ ಪೇಪರ್ ಸಿಗದಿರುವ ಕಾರಣ, ಶಿವಮೊಗ್ಗ ಜಿಲ್ಲೆಯ ನಾಗರಿಕರು ಹೆಚ್ಚಿನ ವೆಚ್ಚ ಭರಿಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ. ಇದರಿಂದಾಗಿ ನಾಕರಿಕರು ಮತ್ತು ಸ್ಟಾಂಪ್ ಪೇಪರ್ ಮಾರಾಟಗಾರರ ನಡುವೆ ನಿತ್ಯ ಘರ್ಷಣೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಸ್ಟಾಂಪ್ ಪೇಪರ್ಗಳ ಕೊರತೆಯಿಂದ ನಕಲಿ ಸ್ಟಾಂಪ್ಪೇಪರ್ಗಳ ಹಾವಳಿ ಸೃಷ್ಟಿಯಾಗುವ ಸಂಭವವೂ ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಕ್ರಮ ಕೈಗೊಂಡು, ಕಡಿಮೆ ಮೊತ್ತದ ಕೋರ್ಟ್ ಫೀ ಸ್ಟಾಂಪ್ ಹಾಗೂ ಸ್ಟಾಂಪ್ ಪೇಪರ್ಗಳು ದೊರೆಯುವಂತೆ ಮಾಡಬೇಕೆಂದು ಅವರು ಸಚಿವರನ್ನು ಕೋರಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications