ಚಿತ್ರದುರ್ಗ : ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 9 ಮಂದಿ ಸಾವು
ಚಿತ್ರದುರ್ಗ : ಇಲ್ಲಿಗೆ 12 ಕಿಮೀ ದೂರದ ಮಾರಘಟ್ಟ ಸಮೀಪದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4 ರಲ್ಲಿ ಶುಕ್ರವಾರ ಸಂಜೆ ಸಂಭವಿಸಿರುವ ಎರಡು ಲಾರಿಗಳ ಮುಖಾಮುಖಿ ಡಿಕ್ಕಿಯಲ್ಲಿ 9 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಗಾಯಗೊಂಡಿರುವ ಇಬ್ಬರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.
ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಕುರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ, ಎದುರಿನಿಂದ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಪಲ್ಟಿ ಹೊಡೆದಿರುವ ಎರಡೂ ಲಾರಿಗಳು ಪರಸ್ಪರ ಸಿಕ್ಕಿಹಾಕಿಕೊಂಡಿವೆ. ಕುರಿ ತುಂಬಿದ್ದ ಲಾರಿಯಲ್ಲಿ ಕುಳಿತವರ ಮೇಲೆ ಕಬ್ಬಿಣದ ಸರಳುಗಳು ಬಿದ್ದು ಪ್ರಾಣಾಪಾಯ ಸಂಭವಿಸಿದೆ. ದುರಂತದಲ್ಲಿ 10 ಕುರಿಗಳೂ ಸತ್ತಿವೆ.
ಗಾಯಗೊಂಡವರು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರ ಹೆಸರು ವಿಳಾಸ ಪತ್ತೆಯಾಗಿಲ್ಲ . ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಮುಂದಿನ ವಿಚಾರಣೆ ನಡೆಯುತ್ತಿದೆ.(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications