ಹುಬ್ಬಳ್ಳಿ-ಧಾರವಾಡ ಸೇರಿದಂತೆ 5 ನಗರಗಳಲ್ಲಿ ಸ್ವಚ್ಛನಗರ ಯೋಜನೆ
ಮೈಸೂರು, ಗುಲ್ಬರ್ಗಾ, ಬೆಳಗಾವಿ, ಬಳ್ಳಾರಿ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸ್ವಚ್ಛತೆ ಕಾಪಾಡುವ ಯೋಜನೆಯನ್ನು ಅಕ್ಟೋಬರ್ 2 ರ ಗಾಂಧಿ ಜಯಂತಿ ದಿನದಿಂದ ಜಾರಿಗೆ ತರಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು , ಇನ್ನು ಏಳೆಂಟು ದಿನಗಳಲ್ಲಿ ಈ ಕುರಿತಾದ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಸ್ವಚ್ಛತೆಯನ್ನು ಕಾಪಾಡುವ ಕುರಿತು ವಿವಿಧ ಮಹಾನಗರ ಪಾಲಿಕೆಗಳ ಆಯುಕ್ತರು, ಆರೋಗ್ಯಾಧಿಕಾರಿಗಳು ಹಾಗೂ ಪರಿಣತರ ಸಭೆಯನ್ನು ಶನಿವಾರ ಕರೆಯಲಾಗಿದೆ ಎಂದರು. ಕಸವನ್ನು ಮನೆಗಳಿಂದ ಸಂಗ್ರಹಿಸಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನಗರಪಾಲಿಕೆ ವಹಿಸಿಕೊಳ್ಳಲಿದೆ. ಇದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸುವುದು ಎಂದು ಚಿಮ್ಮನಕಟ್ಟಿ ಹೇಳಿದರು.
ಶಿವಮೊಗ್ಗ- ಭದ್ರಾವತಿ, ತುಮಕೂರು, ದಾವಣಗೆರೆ ಮತ್ತು ಬಳ್ಳಾರಿ ನಗರಸಭೆಗಳನ್ನು ಕಾರ್ಪೊರೇಷನ್ಗಳಾಗಿ ಮಾರ್ಪಡಿಸಲಾಗುವುದು. ಈ ದಿಸೆಯಲ್ಲಿ ಕೈಗೊಂಡಿರುವ ಸಮೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications