ತಮಿಳುನಾಡಿಗೆ ನೀರು ಕೊಡಲು ಸಾಧ್ಯವೇ ಇಲ್ಲ : ಎಚ್.ಕೆ. ಪಾಟೀಲ್
ಗದಗ್ : ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ರಾಜ್ಯದ ಜನ- ಜಾನುವಾರುಗಳಿಗೇ ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಕೊಡುವುದು ಸಾಧ್ಯವೇ ಇಲ್ಲದ ಮಾತು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗದಗ್ ಜಿಲ್ಲೆಯ ನರಗುಂದದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ನೈಋತ್ಯು ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ತೀವ್ರ ಬರ ಎದುರಿಸುತ್ತಿದೆ. ರಾಜ್ಯದ ಜಲಾಶಯ, ಕೆರೆ ಕಟ್ಟೆಗಳು ಒಣಗಿವೆ. ಪರಿಸ್ಥಿತಿ ಹೀಗಿರುವಾಗ ಕುರುವೈ ಬೆಳೆಗೆ ತಮಿಳುನಾಡು ನೀರು ಕೇಳುವುದು ತರವಲ್ಲ ಎಂದರು.
ಕೆ.ಆರ್.ಎಸ್. ನಿಂದ ತಮಿಳುನಾಡಿಗೆ ನೀರು ಬಿಡುವುದು ಸಾಧ್ಯವೇ ಇಲ್ಲ ಎಂದು ಅವರು ಖಡಾಖಂಡಿತವಾಗಿ ನುಡಿದರು. ಜಯಲಲಿತಾ ಅವರು ನಮ್ಮ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು, ತಮ್ಮ ಬೇಡಿಕೆಯನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.
ಸೆ.6ರಂದು ಸಭೆ : ಈ ಮಧ್ಯೆ ಕಾವೇರಿ ಉಸ್ತುವಾರಿ ಸಮಿತಿ ಸಭೆಯನ್ನು ಸೆ.6ರಂದು ಕರೆಯಲು ಕೇಂದ್ರ ಸರಕಾರ ಸಮ್ಮತಿಸಿದ್ದು, ಈ ಸಭೆಯಲ್ಲಿ ನಾವು ರಾಜ್ಯದ ಪರಿಸ್ಥಿತಿಯನ್ನು ವಿವರಿಸುವುದಾಗಿ ಪಾಟೀಲ್ ತಿಳಿಸಿದರು. ಕೇಂದ್ರ ಸರಕಾರ ಸಭೆ ಕರೆದಿರುವ ಹಿನ್ನೆಲೆಯಲ್ಲಿ ತಮಿಳುನಾಡು ನೀರಾವರಿ ಸಚಿವರ ಕರ್ನಾಟಕ ಭೇಟಿ ಕಾರ್ಯಕ್ರಮ ರದ್ದಾಗಿದೆ ಎಂದೂ ಅವರು ಹೇಳಿದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications