400 ವಿಕೆಟ್ ಸಾಧನೆಗೈದ ವಿಶ್ವದ ಮೊದಲ ಸ್ಪಿನ್ನರ್ ಶೇನ್ ವಾರ್ನ್
ಲಂಡನ್ : ವಿಶ್ವ ವಿಖ್ಯಾತ ಆಸ್ಟ್ರೇಲಿಯಾದ ಲೆಗ್ಸ್ಪಿನ್ನರ್ ಶೇನ್ ವಾರ್ನ್ ಶನಿವಾರ 400 ವಿಕೆಟ್ ಪಡೆದ ಸಾಧನೆ ಮಾಡಿದರು. ಓವಲ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಅವರು ಅಲೆಕ್ ಸ್ಟುವರ್ಟ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆಗೈದರು.
ಈವರೆಗೆ ಕೇವಲ ವೇಗದ ಹಾಗೂ ಮಧ್ಯಮ ವೇಗದ ಬೌಲರುಗಳು ಮಾತ್ರ ಈ ಸಾಧನೆ ಮಾಡಿದ್ದರು. ವಾರ್ನ್ ಈಗ 400 ವಿಕೆಟ್ ಪಡೆದ ವಿಶ್ವದ ಮೊದಲ ಸ್ಪಿನ್ನರ್ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ನ ಸರ್ ರಿಚರ್ಡ್ ಹ್ಯಾಡ್ಲಿ, ಭಾರತದ ಕಪಿಲ್ದೇವ್, ವೆಸ್ಟ್ ಇಂಡೀಸ್ನ ಕೋರ್ಟ್ನಿ ವಾಲ್ಷ್, ಪಾಕಿಸ್ತಾನದ ವಾಸಿಂ ಅಕ್ರಂ ಹಾಗೂ ವೆಸ್ಟ್ ಇಂಡೀಸ್ನ ಕರ್ಟ್ಲಿ ಆ್ಯಂಬ್ರೂಸ್ ಈ ಸಾಧನೆ ಮಾಡಿದ್ದರು.
ಟೆಸ್ಟ್ ಕ್ರಿಕೆಟ್ನಲ್ಲಿ 519 ವಿಕೆಟ್ ಪಡೆದಿರುವ ವೆಸ್ಟ್ ಇಂಡೀಸ್ನ ಕೋರ್ಟ್ನಿ ವಾಲ್ಷ್ ಅತಿಹೆಚ್ಚು ವಿಕೆಟ್ ಪಡೆದಿರುವ ವಿಶ್ವಾಗ್ರೇಸರರಾಗಿದ್ದಾರೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications