ನಡುಹಗಲು ನಡುರಸ್ತೆಯಲ್ಲಿ ಚಾಕು ತೋರಿಸಿ 3 ಲಕ್ಷ ರು.ದರೋಡೆ
ಬೆಂಗಳೂರು : ಗಾಂಧಿಬಜಾರ್ನಲ್ಲಿ ಬಟ್ಟೆ ಅಂಗಡಿಯನ್ನು ಬಾಡಿಗೆಗೆ ಪಡೆಯುವ ಸಲುವಾಗಿ ಬೈಕ್ನಲ್ಲಿ ತೆರಳುತ್ತಿದ್ದ ಅಪ್ಪ್ಪ ಮಗನನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಚಾಕು ತೋರಿಸಿ ಮೂರು ಲಕ್ಷ ರುಪಾಯಿಗಳನ್ನು ನಡುಹಗಲಲ್ಲೇ ದೋಚಿರುವ ಘಟನೆ ನಗರದಲ್ಲಿ ಭಾನುವಾರ ವರದಿಯಾಗಿದೆ.
ವಿಜಯನಗರದ ಕೆಜಿಎಸ್ ಕಾಲೊನಿಯ ನಿವಾಸಿ ರತಿಲಾಲ್ ಡಿಷಾ ಅವರು ತಮ್ಮ ಪುತ್ರ ಪುರಾಷ್ ಷಾ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹಳೇಗುಡ್ಡದಹಳ್ಳಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ದರೋಡೆಕೋರರ ಹಠಾತ್ ದಾಳಿಯಿಂದ ತೀವ್ರ ಆಘಾತಗೊಂಡ ರತಿಲಾಲ್ ಅವರು ಹೃದಯಾಘಾತಕ್ಕೀಡಾಗಿ ಸ್ಥಳದಲ್ಲಿಯೇ ಕುಸಿದುಬಿದ್ದರು. ಅವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಟ್ಟೆ ಅಂಗಡಿ ತೆರೆಯಲು, ಗಾಂಧಿಬಜಾರ್ನಲ್ಲಿ ಅಂಗಡಿಯನ್ನು ಬಾಡಿಗೆಗೆ ಪಡೆಯುವ ಸಲುವಾಗಿ ರತಿಲಾಲ್ ಅವರು ಹಣ ಒಯ್ಯುತ್ತಿದ್ದರು ಎನ್ನಲಾಗಿದೆ. ಜೆಪಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications