ಕೊಡಗು: ಮನೆಗೆ ಬೀಗ ಹಾಕಿ ಹೊರಡುವ ಮುನ್ನ ಪೊಲೀಸರಿಗೆ ತಿಳಿಸಿ!
ಮಡಿಕೇರಿ: ಕ್ರೆೃಂ ಕಂಟ್ರೋಲ್ ವಿಷಯ ಕೊಡಗು ಜಿಲ್ಲೆಯಲ್ಲಿ ಚುರುಕಾಗಿದೆ. ಕೊಡಗಿನ ಪೊಲೀಸರು ಜಿಲ್ಲೆಯ ನಾಗರಿಕರಿಗೆ ಪಾಲಿಸಬೇಕಾದ ಒಂದಷ್ಟು ನಿಯಮಗಳ ಪಟ್ಟಿಯನ್ನು ಮುಂದಿಟ್ಟಿದ್ದಾರೆ.
ಜಿಲ್ಲೆಯಲ್ಲಿ ಕಾಫಿ ಮತ್ತಿತರ ಹೆಚ್ಚು ಬೆಲೆ ಬಾಳುವ ಬೆಳೆ ಬೆಳೆಯುವ ಕೃಷಿಕರು ಕಡ್ಡಾಯವಾಗಿ ಬ್ಯಾಂಕ್ ಲಾಕರ್ಗಳನ್ನು ತೆರೆದು ಹಣ ಮತ್ತು ನಗಗಳನ್ನು ಜೋಪಾನವಾಗಿಟ್ಟುಕೊಳ್ಳಬೇಕು. ಮನೆಗೆ ಬೀಗ ಹಾಕಿ ಹೊರಗೆ ಹೊರಡುವ ಮುನ್ನ ಆ ಪ್ರದೇಶದ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು.
ಮನೆಯ ಬಾಗಿಲುಗಳಿಗೆ ಪುಟ್ಟ ಮಸೂರವನ್ನು ಅಳವಡಿಸಿ, ಬಾಗಿಲು ತೆಗೆಯುವ ಮುನ್ನ ಬಂದಿರುವ ವ್ಯಕ್ತಿ ಯಾರೆಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಕಾಫೀ ಎಸ್ಟೇಟ್ಗಳಿಗೆ ಉದ್ಯೋಗಿಗಳನ್ನು ಸೇರಿಸಿಕೊಳ್ಳುವಾಗ ಅವರ ಬಗ್ಗೆ ಖಚಿತ ಮಾಹಿತಿಗಳನ್ನು ತಿಳಿದುಕೊಂಡಿರಬೇಕು. ಅಪರಿಚಿತ ವ್ಯಕ್ತಿಗಳೊಡನೆ ಅತಿ ಜಾಗರೂಕತೆಯಿಂದ ವ್ಯವಹರಿಸಬೇಕು. ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಗನ್ ಬಳಸಲು ನಾಗರಿಕರಿಗೆ ಅನುಮತಿ ನೀಡಲಾಗಿದೆ.
ತಮ್ಮ ಮನೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡುವಾಗ ಸ್ಟಿಯರಿಂಗ್ ಲಾಕ್ ಅಥವಾ ಕ್ವಾರ್ಟರ್ ಗ್ಲಾಸ್ ಲಾಕ್ಗಳನ್ನು ಬಳಸಲು ನಾಗರಿಕರಿಗೆ ಪೊಲೀಸರು ಸಲಹೆ ಮಾಡಿದ್ದಾರೆ.ಯಾವುದೇ ಅಗತ್ಯ ಸಂದರ್ಭದಲ್ಲಿ 100 ಮತ್ತು 28330 ಫೋನ್ ನಂಬರ್ಗಳನ್ನು ಸಂಪರ್ಕಿಸಬಹುದು. ಅಥವಾ ಮನೆ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications