ಶೃಂಗೇರಿ ಮಠದ ಬಳಿ ಹಿರಿಯ ನಾಗರಿಕರಿಗಾಗಿ‘ಭಾರತಿ ಸೇವಾ ಸದನ’
ಬೆಂಗಳೂರು : ಹಿರಿಯ ನಾಗರಿಕರಿಗಾಗಿ ಭಾರತಿ ಸೇವಾ ಸದನ ಎಂಬ ವೃದ್ಧಾಶ್ರಮ ಮುಂದಿನ ತಿಂಗಳಿನಿಂದ ಶೃಂಗೇರಿ ಮಠದ ಬಳಿ ಆರಂಭವಾಗಲಿದೆ.
ಶೃಂಗೇರಿ ಶಾರದಾಂಬೆ ದೇವಸ್ಥಾನದಿಂದ ಮೂರು ಕಿಲೋ ಮೀಟರ್ ದೂರದಲ್ಲಿರುವ ಈ ವೃದ್ಧಾಶ್ರಮ, ಸದ್ಯಕ್ಕೆ 32 ಮಂದಿಯನ್ನು ಭರಿಸುವ ಸಾಮರ್ಥ್ಯ ಹೊಂದಿದೆ. ಪ್ರಾರ್ಥನಾ ಮಂದಿರ, ಹೂದೋಟ, ಗ್ರಂಥಾಲಯ, ಯೋಗ ಮತ್ತು ಧ್ಯಾನಕ್ಕೆ ಬೇಕಾದ ಸೌಕರ್ಯಗಳು, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ವ್ಯವಸ್ಥೆ ವೃದ್ಧಾಶ್ರಮದಲ್ಲಿದೆ.
ಪ್ರತ್ಯೇಕ ಕೋಣೆಗಳಲ್ಲಿ ಟೀವಿ ಮತ್ತು ಸ್ನಾನದ ಮನೆ ಇರುತ್ತದೆ. ಶೃಂಗೇರಿ ಸ್ವಾಮೀಜಿಗಳ ಧನ್ವಂತರಿ ಆಸ್ಪತ್ರೆಯ ಸಹಯೋಗದೊಂದಿಗೆ ಸಣ್ಣ ಕ್ಲಿನಿಕ್ ಕೂಡ ಆಶ್ರಮದ ಬಳಿಯಿದೆ. ತಿಂಗಳಿಗೆ ಎರಡು ಸಾವಿರ ರೂಪಾಯಿ ಶುಲ್ಕ ನೀಡಬೇಕಾಗುತ್ತದೆ. 2 ಲಕ್ಷ ರೂಪಾಯಿ ದೇಣಿಗೆ ನೀಡುವವರಿಗೆ ಆಶ್ರಮದಲ್ಲಿ ಮಾಸಿಕ ಶುಲ್ಕವಿರುವುದಿಲ್ಲ.
ಸದ್ಯದಲ್ಲಿಯೇ ಆಶ್ರಮವನ್ನು ವಿಸ್ತರಿಸಿ 96 ಮಂದಿ ಹಿರಿಯ ನಾಗರಿಕರನ್ನು ಸೇರಿಸಿಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಬೆಂಗಳೂರು ನಗರ ಮತ್ತು ಮಹಾರಾಷ್ಟ್ರದಲ್ಲಿಯೂ ಇಂತಹ ಆಶ್ರಮಗಳನ್ನು ತೆರೆಯುವ ಯೋಜನೆಯಿದೆ ಎಂದು ಆಶ್ರಮದ ಟ್ರಸ್ಟೀ ಎಂ. ಎಸ್.ಪೈ ಪ್ರಕಟಣೆಯಲ್ಲಿ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications