ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪೆಪ್ಸಿಕೋಲಾದ ಭರಾಟೆಯಿರದು
ಬೆಂಗಳೂರು : ಅಕ್ಟೋಬರ್ ತಿಂಗಳಿನಲ್ಲಿ ನಗರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಲ್ಲಿ ಪೆಪ್ಸಿ , ಕೋಕಾ ಕೋಲಾ, ಬಿಯರ್ಗಳ ಜಾಹೀರಾತು ಭರಾಟೆಯಿರುವುದಿಲ್ಲ.
ಮದ್ಯ, ತಂಬಾಕು, ಮತ್ತು ತಂಪು ಪಾನೀಯಗಳು ಚಲನ ಚಿತ್ರೋತ್ಸವದ ಪ್ರಾಯೋಜಕತ್ವ ವಹಿಸಲು ಪ್ರೋತ್ಸಾಹ ನೀಡದಿರುವಂತೆ ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಆದ್ದರಿಂದ ಚಿತ್ರೋತ್ಸವ ವೇದಿಕೆಯಲ್ಲಿ ಪೆಪ್ಸಿ, ಕೋಕಾ ಕೋಲಾ, ಮದ್ಯ ಮತ್ತು ತಂಬಾಕು ಕಂಪೆನಿಗಳ ಜಾಹೀರಾತುಗಳನ್ನು ಪ್ರದರ್ಶಿಸಲಾಗುವುದಿಲ್ಲ.
ಈ ಜಾಹೀರಾತುದಾರರು ಪ್ರದರ್ಶನ ವಿಭಾಗದಲ್ಲಿ ಅಥವಾ ಇನ್ನಿತರ ಜಾಗಗಳಲ್ಲಿ ಜಾಹೀರಾತುದಾರರು ಫಲಕಗಳನ್ನು ಬೇಕಿದ್ದಲ್ಲಿ ಹಾಕಿಕೊಳ್ಳಬಹುದು ಎಂದು ರಾಜ್ಯ ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್ ಸೋಮವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಚಿತ್ರೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರವು ಸದ್ಯಕ್ಕೆ ಮಾಹಿತಿ ತಂತ್ರಜ್ಞಾನ ಕಂಪೆನಿಗಳ ಜಾಹೀರಾತನ್ನು ಅವಲಂಬಿಸಿದೆ. ಚಿತ್ರೋತ್ಸವದ ಖರ್ಚಿನಲ್ಲಿ ಸರಕಾರದ ಪಾಲು 2 ಕೋಟಿ ರೂಪಾಯಿ. ಈ ಮೊತ್ತವನ್ನು ಹೊಸದಾಗಿ ಆರಂಭವಾದ ಐಟಿ ಕಂಪೆನಿಗಳ ಜಾಹೀರಾತನ್ನು ಪ್ರೋತ್ಸಾಹಿಸುವ ಮೂಲಕ ಸಂಗ್ರಹಿಸಲು ಯತ್ನಿಸಲಾಗುವುದು ಎಂದು ಬಿಕೆಸಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications