ಏಷ್ಯಾದ ಐಸಿಟಿ ಯೋಜನೆಗಳಿಗೆ ಜಪಾನಿನ 30 ದಶಲಕ್ಷ ಡಾಲರ್
ಬೆಂಗಳೂರು : ಏಷ್ಯಾದ ಮಾಹಿತಿ ಹಾಗೂ ಸಂಪರ್ಕ ಜ್ಞಾನ (ಐಸಿಟಿ) ಯೋಜನೆಗಳಿಗಾಗಿ ಏಷ್ಯನ್ ಡೆವೆಲಪ್ಮೆಂಟ್ ಬ್ಯಾಂಕ್ (ಎಡಿಬಿ) ಗೆ 30 ದಶಲಕ್ಷ ಡಾಲರ್ ನೆರವು ನೀಡುವುದಾಗಿ ಜಪಾನ್ ಭರವಸೆ ಕೊಟ್ಟಿದೆ.
ಎಡಿಬಿಯ ಪಶ್ಚಿಮ ವಲಯದ ಕಾರ್ಯಕ್ರಮ ನಿರ್ದೇಶಕ ಯಾಶಿರೋ ಇವಾಸಕಿ ಸೋಮವಾರ ರಾತ್ರಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಜಪಾನ್ ಮಾಡುತ್ತಿರುವ ಧನ ಸಹಾಯಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಿ, ಏಷ್ಯಾದ ಬಡತನ ನಿವಾರಣೆಗೆ ಟೊಂಕಕಟ್ಟಬೇಕಷ್ಟೆ. ಖಾಸಗಿ ವಲಯವನ್ನು ಐಸಿಟಿ ಕ್ಷೇತ್ರದಲ್ಲಿ ಸಾಕಷ್ಟು ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಿ, ಮಾಹಿತಿ ತಂತ್ರಜ್ಞಾನದ ಮೂಲಕ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸೌಹಾರ್ದ ಸ್ಥಾಪಿಸುವುದು ನಮ್ಮ ಗುರಿಯಾಗಿದೆ ಎಂದು ಇವಾಸಕಿ ಹೇಳಿದರು.
ಮಂಗಳವಾರ ತಾಜ್ ವೆಸ್ಟ್ ಎಂಡ್ ಹೊಟೇಲಿನಲ್ಲಿ ಮಾಹಿತಿ ಮತ್ತು ಸಂಪರ್ಕ ಜ್ಞಾನ ಕುರಿತ ದುಂಡು ಮೇಜಿನ ಸಮಾವೇಶದಲ್ಲಿ ಭಾಗವಹಿಸಲು ಯಾಶಿರೋ ಬೆಂಗಳೂರಿಗೆ ಆಗಮಿಸಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications