ಹಳೇ ಹುಬ್ಬಳ್ಳಿಯಲ್ಲಿ ನಾಗಪ್ಪ ಮಾರಡಗಿ ಮೆರವಣಿಗೆ
ಹುಬ್ಬಳ್ಳಿ : ವೀರಪ್ಪನ್ ಬಂಧನದಿಂದ ತಪ್ಪಿಸಿಕೊಂಡು ಬಂದು ಸುದ್ದಿ ಮಾಡಿದ ನಾಗಪ್ಪ ಮಾರಡಗಿ ಹಳೆಯ ಹುಬ್ಬಳ್ಳಿಯಲ್ಲಿ ಸೋಮವಾರ ಮನೆಮಾತು. ಹುಬ್ಬಳ್ಳಿಯ ಗಜಾನನ ಮಹಾಮಂಡಲ ಈತನನ್ನು ಕೂರಿಸಿದ್ದು ಉಪ್ಪರಿಗೆ ಮೇಲೆ.
ನಾಗಪ್ಪ ಅವರನ್ನು ಬೀದಿ ತುಂಬೆಲ್ಲಾ ಮೆರವಣಿಗೆ ಮಾಡಿ, ಸಾಯಿ ಮಂದಿರದಲ್ಲಿ ಪತ್ನಿ ಸಮೇತ ಸನ್ಮಾನಿಸಿ, ಜೈಕಾರ ಹಾಕಿದರು. ಕೆಲವು ಮಾಧ್ಯಮಗಳ ಪ್ರತಿನಿಧಿಗಳೊಡನೆ ಮಾತನಾಡಿದ ಮಾರಡಗಿ ಕುಟುಂಬದವರು, ಈಗ ತಮ್ಮ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದರು. ವಿವಿಧ ಸೇವಾ ಸಂಸ್ಥೆಗಳು ನಾಗಪ್ಪ ಮಾರಡಗಿ ಕುಟುಂಬಕ್ಕೆ ಸಹಾಯ ಮಾಡಲು ನಿಧಿ ಸಂಗ್ರಹಿಸುತ್ತಿರುವುದನ್ನೂ ಒಪ್ಪಿಕೊಂಡರು.
ಸಂಸದರ ಪರಿಹಾರ ನಿಧಿಯಿಂದ 2 ಲಕ್ಷ ರುಪಾಯಿ ಹಾಗೂ ಹುಬ್ಬಳ್ಳಿಯಲ್ಲಿ ಒಂದು ಗೃಹ ನಿವೇಶನವನ್ನು ನಾಗಪ್ಪ ಮಾರಡಗಿ ಅವರಿಗೆ ಮಂಜೂರು ಮಾಡಿಸಲು ಬಿಜೆಪಿ ಮುಖಂಡ ಹಾಗೂ ಸಂಸದ ವಿಜಯ ಸಂಕೇಶ್ವರ್ ಒಪ್ಪಿದ್ದಾರೆ ಎಂದು ಗಜಾನನ ಮಹಾಮಂಡಲದ ಕಾರ್ಯದರ್ಶಿ ಡಿ.ಗೋವಿಂದ ರಾವ್ ತಿಳಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications