ಕೃಷ್ಣ ಅಧ್ಯಕ್ಷತೆಯಲ್ಲಿ ರಾಜ್ಯ ಯೋಜನಾಮಂಡಳಿಯ ಪ್ರಥಮ ಸಭೆ
ಬೆಂಗಳೂರು : ಕರ್ನಾಟಕ ರಾಜ್ಯ ಯೋಜನಾ ಮಂಡಳಿಯ ಪ್ರಪ್ರಥಮ ಸಭೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಈ ಸಭೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸುವ ಬಗ್ಗೆ ಹಾಗೂ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.
ಆರ್ಥಿಕ ತಜ್ಞರಾದ ಡಾ. ಎನ್.ಕೆ. ತಿಂಗಳಾಯ, ಪ್ರೊ. ಅಬ್ದುಲ್ ಅಜೀಜ್ ಅವರು ಮಾಡಿರುವ ಶಿಫಾರಸುಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಡಳಿಯ ಉಪಾಧ್ಯಕ್ಷ ಜೈರಾಮ್ ರಮೇಶ್ ಇನ್ನು ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸುವುದಾಗಿ ತಿಳಿಸಿದರು.
ಮಂಡಳಿ ಮಾಡುವ ಶಿಫಾರಸುಗಳನ್ನು ಅಭಿವೃದ್ಧಿ ಕಾರ್ಯದರ್ಶಿ ವಿಶ್ವನಾಥನ್ ನೇತೃತ್ವದ ಸಮಿತಿ ಪರಿಶೀಲಿಸಲಿದ್ದು, ಆ ಶಿಫಾರಸುಗಳು ಒಂದೆರಡು ವಾರದಲ್ಲೇ ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು ಎಂದೂ ಅವರು ಹೇಳಿದರು.
ಹಿಂದುಳಿದಿರುವ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಮುಂದಿನ ಸಭೆಯನ್ನು ಗುಲ್ಬರ್ಗಾದಲ್ಲಿ ನಡೆಸುವುದಾಗಿಯೂ ಅವರು ಹೇಳಿದರು. ಆ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಮತ್ತು ಬಯಲು ಸೀಮೆ ಮಂಡಳಿಗಳ ಕಾರ್ಯಗಳ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಸದಸ್ಯರಾದ ಡಾ. ಮುನಿಯಮ್ಮ, ಕೆ. ಮೋಹನ್, ಡಾ.ಎನ್.ಕೆ. ತಿಂಗಳಾಯ, ಅಬ್ದುಲ್ ಅಜೀಜ್ ಮೊದಲಾದವರು ಪಾಲ್ಗೊಂಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications