ದಕ್ಷಿಣ ಭಾರತದ ಅತಿದೊಡ್ಡ ಹಾಲು ಡೈರಿ ಗುರುವಾರ ಕಾರ್ಯಾರಂಭ
ಬೆಂಗಳೂರು : ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ ಕರ್ನಾಟಕ ಸಹಕಾರಿ ಹೈನೋದ್ಯಮ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶುಭ ಸಂದರ್ಭದಲ್ಲಿ 38.7 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮೆಗಾ ಡೈರಿ ಗುರುವಾರದಿಂದ ವಿದ್ಯುಕ್ತವಾಗಿ ಕಾರ್ಯಾರಂಭ ಮಾಡಲಿದೆ.
ದಕ್ಷಿಣ ಭಾರತದಲ್ಲಿಯೇ ಅತಿ ದೊಡ್ಡ ಹಾಲು ಡೈರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಮೆಗಾಡೈರಿ ದಿನನಿತ್ಯ 6 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯವನ್ನು ಹೊಂದಿದೆ. ಸಂಸ್ಕರಣಾ ಸಾಮರ್ಥ್ಯವನ್ನು 10 ಲಕ್ಷಕ್ಕೂ ಏರಿಸಬಹುದಾಗಿದೆ. ಈ ವಿಷಯವನ್ನು ರಾಜ್ಯ ಪಶುಸಂಗೋಪನೆ ಹಾಗೂ ಸಕ್ಕರೆ ಖಾತೆ ಸಚಿವ ಎ. ಕೃಷ್ಣಪ್ಪ ಹಾಗೂ ಕೆ.ಎಂ.ಎಫ್. ಅಧ್ಯಕ್ಷ ಎಚ್.ಡಿ. ರೇವಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೆಗಾ ಡೈರಿಯಲ್ಲಿ ಹಾಲಿನ ಗುಣಮಟ್ಟ ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಲಿನ ಸಂಸ್ಕರಣೆಯಲ್ಲಿ ಕಂಪ್ಯೂಟರ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸಲಿವೆ. ಜರ್ಮನಿಯಿಂದ ತರಿಸಲಾಗಿರುವ ಆಟೋ ಸ್ಟಾಂಡರ್ ಡೈಸೇಸನ್‌ನಿಂದ ಪ್ರತಿ ಹನಿ ಹಾಲಿನಲ್ಲೂ ಪೌಷ್ಟಿಕಾಂಶ ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.
ಸೆಸ್ : ಕರ್ನಾಟಕದಲ್ಲಿ ಮಾರಾಟ ಮಾಡಲಾಗುವ ಹೊರ ರಾಜ್ಯದ ಹಾಲಿನ ಮೇಲೆ ಉಪಕರ ವಿಧಿಸಲು ಸರಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣಪ್ಪ ತಿಳಿಸಿದರು. ರೋಗರಹಿತ ಪ್ರಾಣಿಗಳ ಸಂರಕ್ಷಣೆಗೆ ಸಹ ಕ್ರಮ ಕೈಗೊಳ್ಳಲಾಗಿದೆ ಎಂದರು.
24 ಗಂಟೆ ಕೌಂಟರ್ : ಬೆಳ್ಳಿ ಹಬ್ಬದ ನೆನಪಿನಲ್ಲಿ ಬೆಂಗಳೂರು ಡೈರಿ ಆವರಣದಲ್ಲಿ ದಿನದ 24 ಗಂಟೆಗಳ ಕಾಲವೂ ಹಾಲು ಮಾರಾಟ ಮಾಡುವ ವಿಶೇಷ ಕೌಂಟರ್ ಅನ್ನು ಸಚಿವ ಕೃಷ್ಣಪ್ಪ ಅವರು ಬುಧವಾರ ಉದ್ಘಾಟಿಸಿದರು. ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟದ ಹಾಲಿಗೆ ವಿದೇಶೀ ಮಾರುಕಟ್ಟೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಶ್ರೀಲಂಕಾ, ದುಬೈ ಮತ್ತಿತರ ರಾಷ್ಟ್ರಗಳೊಂದಿಗೆ ವ್ಯವಹರಿಸಲಾಗಿದೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications