ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕು : ಕೃಷ್ಣ
ಬೆಂಗಳೂರು : ಕೇಂದ್ರ ಸರಕಾರವು ರಾಜ್ಯ ಸರಕಾರಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರತಿಪಾದಿಸಿದ್ದಾರೆ. ಬುಧವಾರ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 75ನೇ ಜನ್ಮದಿನದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕು ಎಂದು ಬಹು ಹಿಂದೆಯೇ ರಾಮಕೃಷ್ಣ ಹೆಗಡೆ ಪ್ರತಿಪಾದಿಸಿದ್ದರು ಆದರೆ, ಇಂದಿಗೂ ಅದು ನನಸಾಗಿಲ್ಲ. 1973ರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಸಹ ರಾಜ್ಯಗಳಿಗೆ ಸ್ವಾಯತ್ತತೆ ನೀಡಬೇಕು ಎಂಬ ಬಗ್ಗೆ ದನಿ ಎತ್ತಿದ್ದರು, ದಕ್ಷಿಣ ರಾಜ್ಯಗಳಿಗೆ ಹೆಚ್ಚಿನ ಹಾಗೂ ವಿಶೇಷ ಗಮನ ಹರಿಸುವಂತೆ ರಾಮಕೃಷ್ಣ ಹೆಗಡೆ ಪ್ರತಿಪಾದಿಸುತ್ತಲೇ ಬಂದಿದ್ದರು ಎಂದು ಕೃಷ್ಣ, ತಮ್ಮ ನೆನಪಿನ ಬುತ್ತಿಯನ್ನು ಬಿಚ್ಚಿಟ್ಟರು.
ಹೆಗಡೆಯವರು ಅಗಾಧ ಪಾಂಡಿತ್ಯದ ವಿನೀತ ಸ್ವಭಾವದ ವ್ಯಕ್ತಿ. ನಾವು ಅವರ ಏಳು ಬೀಳುಗಳನ್ನು ಕಂಡಿದ್ದೇವೆ. ಅವರ ವಿನೀತ ಸ್ವಭಾವ ಅನುಕರಣೀಯ ಎಂದ ಕೃಷ್ಣ, ಕಳೆದ ಅರ್ಧ ಶತಮಾನದಲ್ಲಿ ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರಾಮಕೃಷ್ಣ ಹೆಗಡೆಯವರ ಸಾಧನೆಗಳನ್ನು ಪ್ರಶಂಸಿಸಿದರು. ರಾಜಕೀಯ ವಿಕೇಂದ್ರೀಕರಣದಿಂದ ಹೆಗಡೆ ಅವರು ಕರ್ನಾಟಕ ರಾಜಕೀಯ ರಂಗದಲ್ಲಿ ಶಾಶ್ವತ ಹೆಸರು ಮಾಡಿದ್ದಾರೆ ಎಂದೂ ಕೃಷ್ಣ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications