‘ಪ್ರಶಸ್ತಿಗಳನ್ನೆಲ್ಲ ಅಟ್ಟದ ಮೇಲೆ ಮಡಗಿವ್ನಿ’- ಸಾಲು ಮರದ ತಿಮ್ಮಕ್ಕ
ಬೆಂಗಳೂರು : ‘ಜಾಗ ಇಲ್ಲ ಅಂತ, ಪ್ಲಾಸ್ಟಿಕ್ ಚೀಲದಾಗೆ ಹಾಕಿ ಅಟ್ಟದ ಮೇಲೆ ಮಡಗಿವ್ನಿ’ ! ಸಾಲು ಮರದ ತಿಮ್ಮಕ್ಕ ತಮಗೆ ಬಂದಿರುವ ಪ್ರಶಸ್ತಿಗಳನ್ನು ಜೋಪಾನವಾಗಿರಿಸಿರುವ ಬಗೆಯನ್ನು ವಿವರಿಸಿದ್ದು ಹೀಗೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿತ್ತು . ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಿ ತಿಮ್ಮಕ್ಕ ಮಾತನಾಡಿದರು.
ನೀವು ಹುಡುಗ್ರು, ಮನೆ ಪಕ್ಕದಾಗೆ ಇಲ್ಲ ಇಸ್ಕೂಲ್‌ನಾಗೆ ಗಿಡ ಬೆಳಸಬೇಕು. ಯಾವ್ದಾದ್ರೂ ಒಂದೊಂದು ಗಿಡ ಬೆಳಸ್ಬೇಕು ಎಂದು ವಿದ್ಯಾರ್ಥಿಗಳಿಗೆ ತಿಮ್ಮಕ್ಕ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೋಗ್ಯ ಸಚಿವ ಡಾ.ಎ.ಬಿ.ಮಲಕರೆಡ್ಡಿ ಜೀವನದಲ್ಲಿ ಮನರಂಜನೆ ಅಗತ್ಯ. ಆದರೆ, ಮನರಂಜನೆಯೇ ಜೀವನದ ಉದ್ದೇಶವಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ಜಿ.ವಿ.ನಾಗರಾಜ್, ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕೆ.ಆರ್.ರಾಮಕೃಷ್ಣ, ಸಂಘದ ಅಧ್ಯಕ್ಷ ಎ.ಪುಟ್ಟಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಾಲಂಗೋಚಿ: ಕಾರ್ಯಕ್ರಮದಲ್ಲಿ ಪ್ರಶಸ್ತಿಪತ್ರ ನೀಡಿ ತಿಮ್ಮಕ್ಕ ಅವರನ್ನು ಸನ್ಮಾನಿಸಲಾಯಿತು. ಅಲ್ಲಿಗೆ ತಿಮ್ಮಕ್ಕನವರ ಚೀಲಕ್ಕೆ ಮತ್ತೊಂದು ಸರಕು ಸಿಕ್ಕಂತಾಯಿತು!
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications