ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಜೊತೆಗೆ 178 ಕೋಟಿ ರು. ನಿಧಿ
ಬೆಂಗಳೂರು : ಬಳ್ಳಾರಿ ಜಿಲ್ಲೆಯ ಸರ್ವತೋಮುಖ ಪ್ರಗತಿಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ 3300 ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಜ್ ಜೊತೆಗೆ, 2001-02 ನೇ ಇಸವಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 178 ಕೋಟಿ ರು.ಗಳ ಹೆಚ್ಚುವರಿ ನಿಧಿಯನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಕಳೆದ ವರ್ಷ ಪ್ರಕಟಿಸಿದ್ದ 3300 ಕೋಟಿ ರು. ವಿಶೇಷ ಪ್ಯಾಕೇಜ್‌ನಡಿಯಲ್ಲಿ ವಿವಿಧ ಯೋಜನೆಗಳ ಕಾಮಗಾರಿಯ ಪ್ರಗತಿ ಸಮೀಕ್ಷೆಯನ್ನು ಸಭೆ ನಡೆಸಿತು. ಈ ವಿಷಯವನ್ನು ಬಳ್ಳಾರಿ ಜಿಲ್ಲಾ ಉಪ ಆಯುಕ್ತ ಜಾವೇದ್ ಅಖ್ತರ್ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು .
ಜಿಲ್ಲೆಯಲ್ಲಿನ ಪ್ರಸಕ್ತ ವರ್ಷದ ಯೋಜನೆಗಳ ಅನುಷ್ಠಾನದ ಬಗೆಗೆ ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದರು ಎಂದು ಅಖ್ತರ್ ಹೇಳಿದರು. 2500 ಕೋಟಿ ರುಪಾಯಿ ಬಂಡವಾಳವನ್ನು ವಿಜಯನಗರ ಉಕ್ಕು ಕಾರ್ಖಾನೆಯಲ್ಲಿ ತೊಡಗಿಸುವುದರ ಜೊತೆಗೆ, ಹೆಚ್ಚುವರಿ 800 ಕೋಟಿ ರುಪಾಯಿಗಳನ್ನು 2000-01 ರಿಂದ ಮೂರು ವರ್ಷ ಅವಧಿಯವರೆಗಿನ ಯೋಜನೆಗಳಲ್ಲಿ ವಿನಿಯೋಗಿಸಲಾಗುವುದು ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಆಯ್ಕೆಯಾಗಿ ತೆರವು ಮಾಡಿದ್ದ ಬಳ್ಳಾರಿ ಕ್ಷೇತ್ರದ ಅಭಿವೃದ್ಧಿಗೆ, 3300 ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಜನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications