ವಿವಿಧ ವಿಷಯಗಳ ಡಿಪ್ಲೊಮ: ಹಂಪಿ ವಿವಿಯಿಂದ ಅರ್ಜಿಗಳ ಆಹ್ವಾನ

ಹೊಸಪೇಟೆ : ಹಂಪಿ ಕನ್ನಡ ವಿಶ್ವ ವಿದ್ಯಾಲಯ 2001-02 ಇಸವಿಯ ಶೈಕ್ಷಣಿಕ ವರ್ಷದಿಂದ ವಿವಿಧ ವಿಷಯಗಳಲ್ಲಿ ಡಿಪ್ಲೊಮ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದು , ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಅಧ್ಯಯನ, ಕ್ರಿಯಾತ್ಮಕ ಕನ್ನಡ, ಮಹಿಳಾ ಅಧ್ಯಯನ, ಪುರಾತತ್ವ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಡಿಪ್ಲೊಮಾಗಳು ಸ್ನಾತಕೋತ್ತರ ಕೋರ್ಸ್‌ಗಳಾಗಿದ್ದು , ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಆಡಳಿತ ಕನ್ನಡ ವಿಷಯದಲ್ಲಿ ಕೂಡ ಡಿಪ್ಲೊಮ ನೀಡುತ್ತಿದ್ದು , ಸರ್ಕಾರಿ ಸೇವೆಯಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿರುವವರು ಅಥವಾ ಪಿಯುಸಿ ಉತ್ತೀರ್ಣರಾಗುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜನಪದ ಕಲೆ ಡಿಪ್ಲೊಮ ಕೋರ್ಸಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಯನ್ನು ಅರ್ಹತೆಯನ್ನಾಗಿ ನಿಗದಿಪಡಿಸಲಾಗಿದೆ. ಈ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್‌ 5. ವಿವರಗಳಿಗೆ ಹಂಪಿ ವಿಶ್ವ ವಿದ್ಯಾಲಯ, ಕಮಲಾಪುರ, ಹೊಸಪೇಟೆ, ಬಳ್ಳಾರಿ ಜಿಲ್ಲೆ ವಿಳಾಸವನ್ನು ಸಂಪರ್ಕಿಸಬಹುದು.

(ಇನ್ಫೋ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+