‘ಪಂಚವಾರ್ಷಿಕ ಯೋಜನೆ ಫಲವಾಗಿ ರಾಷ್ಟ್ರ ಸ್ವಾವಲಂಬನೆ ಸಾಧಿಸಿದೆ’

ಬೆಂಗಳೂರು : ಪ್ರತಿನಿತ್ಯ 6 ಲಕ್ಷ ಲೀಟರ್‌ ಹಾಲು ಸಂಸ್ಕರಣಾ ಸಾಮರ್ಥ್ಯ ಉಳ್ಳ ಹಾಗೂ ಅತ್ಯಾಧುನಿಕ ತಾಂತ್ರಿಕತೆಯ ಮೆಗಾ ಡೈರಿಯನ್ನು ಗುರುವಾರ ವಿಧ್ಯುಕ್ತವಾಗಿ ರಾಷ್ಟ್ರಕ್ಕೆ ಸಮರ್ಪಿಸಲಾಯಿತು. ಈ ಮೆಗಾ ಡೈರಿ ಹಾಗೂ ಹೈನೋದ್ಯಮದ ರಜತ ಮಹೋತ್ಸವವನ್ನು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಉದ್ಘಾಟಿಸಿದರು.

ಡೈರಿಯನ್ನು ಉದ್ಘಾಟಿಸಿ, ಅದರ ಕಾರ್ಯವೈಖರಿಯನ್ನು ವೀಕ್ಷಿಸಿ ಮಾತನಾಡಿದ ಕೃಷ್ಣ, ಪಂಚವಾರ್ಷಿಕ ಯೋಜನೆಗಳ ಫಲವಾಗಿ ರಾಷ್ಟ್ರ ಉತ್ಪಾದನಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. ಪರಸ್ಪರ ಸಹಕಾರದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ನುಡಿದರು. ಸಹಕಾರಿ ಕ್ಷೇತ್ರದಲ್ಲಿ ಸರಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಸ್ಪರ್ಧೆ ಎದುರಿಸಲು ಸಿದ್ಧ : ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಂಧ್ರಪ್ರದೇಶದೊಂದಿಗೆ ಸ್ಪರ್ಧೆ ಎದುರಿಸುತ್ತಿರುವಂತೆಯೇ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಗುಜರಾತ್‌ನೊಂದಿಗೆ ಸ್ಪರ್ಧೆ ಎದುರಿಸುತ್ತಿದೆ. ಈ ಸ್ಪರ್ಧೆಯಲ್ಲಿ ಕರ್ನಾಟಕ ಅಗ್ರೇಸರನಾಗುವಂತೆ ಮಾಡಲು ರೈತರು ಶ್ರಮಪಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಕ್ಕರೆ ಸಚಿವ ಎ. ಕೃಷ್ಣಪ್ಪ, ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಎಚ್‌.ಡಿ. ರೇವಣ್ಣ, ಹೈನು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಡಾ. ಅಮೃತಾ ಪಟೇಲ್‌, ರಾಷ್ಟ್ರೀಯ ಹೈನು ಸಹಕಾರಿ ಮಹಾಮಂಡಳದ ಅಧ್ಯಕ್ಷ ಡಾ. ಕುರಿಯನ್‌, ಸಹಕಾರ ಸಚಿವ ಡಿ.ಕೆ. ಶಿವಕುಮಾರ್‌ ಮೊದಲಾದವರು ಪಾಲ್ಗೊಂಡಿದ್ದರು.

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+