ರಾಜ್ಯದ ಅಭಿವೃದ್ಧಿಗೆ ವಿಶ್ವಬ್ಯಾಂಕ್‌ನಿಂದ 150 ದಶಲಕ್ಷ ಡಾಲರ್ ಬಿಡುಗಡೆ
ಬೆಂಗಳೂರು : ಕರ್ನಾಟಕ ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 150 ದಶಲಕ್ಷ ಡಾಲರ್‌ಗಳ ಪ್ರಥಮ ಕಂತಿನ ನೆರವಿನ ಧನವನ್ನು ವಿಶ್ವಬ್ಯಾಂಕ್ ಬಿಡುಗಡೆ ಮಾಡಿದೆ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರಕಾರ 1,200 ಕೋಟಿ ರುಪಾಯಿಗಳ ನೆರವನ್ನು ವಿಶ್ವಬ್ಯಾಂಕ್‌ನಿಂದ ಕೋರಿದ್ದು, ಬ್ಯಾಂಕ್ ಮೊದಲ ಕಂತಾಗಿ 150 ಮಿಲಿಯನ್ ಡಾಲರ್ ಬಿಡುಗಡೆ ಮಾಡಿದೆ. ಈ ಹಣವನ್ನು ಯಾವ ಅಭಿವೃದ್ದಿ ಕಾರ್ಯಕ್ಕೆ ಬಳಸಬೇಕು ಎಂಬ ಬಗ್ಗೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.
ವಿಧಾನಸೌಧದ ದಕ್ಷಿಣ ಬ್ಲಾಕ್ ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ವಿಶ್ವಬ್ಯಾಂಕ್ ನೆರವಿನ ಹಣದಿಂದ ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications