ದಲಿತ ಮಹಿಳೆಯ ಬೆತ್ತಲೆ ಮೆರವಣಿಗೆ : ಪುಂಡುಗಂದಾಯ ಪರಿಶೀಲನೆ
ಬಳ್ಳಾರಿ : ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ನಡೆಸುತ್ತಿದ್ದಾಗ, ಆ ಅಮಾನವೀಯ ಕೃತ್ಯವನ್ನು ತಡೆಯದೆ ನೋಡುತ್ತಾ ನಿಂತಿದ್ದ ಹಾಗೂ ಅಕೃತ್ಯಕ್ಕೆ ಕುಮ್ಮಕ್ಕು ನೀಡಿದ ಕಾರಣಕ್ಕಾಗಿ ವಣನೂರು ಗ್ರಾಮದಲ್ಲಿ ಪುಂಡುಗಂದಾಯ ವಿಧಿಸುವ ಬಗ್ಗೆ ರಾಜ್ಯ ಸರಕಾರ ಪರಿಶೀಲಿಸುತ್ತಿದೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ಘಟನೆಯಿಂದ ನೊಂದ ದಲಿತ ಕುಟುಂಬಕ್ಕೆ ಸಾಂತ್ವನ ಹೇಳಲು ವಿಶೇಷ ಹೆಲಿಕಾಪ್ಟರ್‌ನಲ್ಲಿ ಇಲ್ಲಿಗೆ ಆಗಮಿಸಿದ ಅವರು, ದೌರ್ಜನ್ಯಕ್ಕೊಳಗಾಗಿ ನೊಂದು, ಆಸ್ಪತ್ರೆ ಸೇರಿರುವ ಎರ್ರೆಮ್ಮಳನ್ನು ಭೇಟಿ ಮಾಡಿ ಸರಕಾರದ ಪರವಾಗಿ 50 ಸಾವಿರ ರುಪಾಯಿಗಳ ಚೆಕ್ ನೀಡಿದರು.
ಆನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, ಇಂತಹ ಅಮಾನವೀಯ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘೋರ ಕೃತ್ಯ ನಡೆಯದಂತೆ ಕಟ್ಟೆಚ್ಚರವಹಿಸುವ ಭರವಸೆಯನ್ನೂ ಖರ್ಗೆ ನೀಡಿದರು.
ಯಾವ ಹಳ್ಳಿಯಲ್ಲಿ ಸಾಮಾಜಿಕ ದೌರ್ಜನ್ಯ ನಡೆಯುತ್ತದೋ, ಅಲ್ಲಿ ದೌಜ್ಯನ್ಯ ನಡೆಸಿದವರ ಮೇಲೆ ಪುಂಡುಗಂದಾಯ ಹೇರವ ಅವಕಾಶ ಕಾನೂನಿನಲ್ಲಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಇದು ಮನುಕುಲವೇ ತಲೆತಗ್ಗಿಸುವಂತಹ ಘೋರ ಕೃತ್ಯ. ಈಹೊತ್ತು ವಣನೂರಿನಲ್ಲಿ ಭೀತಿಯ ವಾತಾವರಣ ಇದೆ. ಹೀಗಾಗಿ ದಲಿತ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ನೀಡಲಾಗುವುದು ಎಂದರು.
ನ್ಯಾಯಾಂಗ ತನಿಖೆಗೆ ಒತ್ತಾಯ : ಇತ್ತೀಚೆಗೆ ವಣನೂರಿನಲ್ಲಿ ನಡೆದ ದಲಿತ ಮಹಿಳೆಯ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿರುವ ಬಳ್ಳಾರಿ ಜಿಲ್ಲಾ ದಲಿತ ಸಂಘರ್ಷ ಸಮಿತಿ, ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.
(ಪಿ.ಟಿ.ಐ/ಇನ್‌ಫೋವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications