ಸೆಪ್ಟೆಂಬರ್ ತಿಂಗಳಿನಿಂದಲೇ ಲೋಡ್ ಷೆಡ್ಡಿಂಗ್ ಜಾರಿ ಸಂಭವ
ಬೆಂಗಳೂರು : ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ವಲಯದಲ್ಲೂ ವಿದ್ಯುತ್ ದರ ಏರಿಸುವುದು ಅನಿವಾರ್ಯ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿ.ಪಿ. ಬಳಿಗಾರ್ ಪುನರುಚ್ಚರಿಸಿದ್ದಾರೆ. ಯಾವ ವಲಯಕ್ಕೆ ಎಷ್ಟು ದರ ಹೆಚ್ಚಿಸಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದೂ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆಯ ಪ್ರಮಾಣ ಕುಸಿತದಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ತೀವ್ರ ವಿದ್ಯುತ್ ಕೊರತೆ ಎದುರಾಗಿದೆ. ಹೀಗಾಗಿ ಸೆಪ್ಟೆಂಬರ್ ತಿಂಗಳ ಅಂತ್ಯದಿಂದಲೇ ಲೋಡ್ ಷೆಡ್ಡಿಂಗ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂಬ ಸುಳಿವನ್ನೂ ಅವರು ನೀಡಿದರು.
ವಿದ್ಯುತ್ ದರ ಏರಿಕೆ ಸಂಬಂಧ ಸೆಪ್ಟೆಂಬರ್ 5ರಂದು ನಡೆಯಲಿರುವ ಸಂಪುಟ ಸಭೆ ನಿರ್ಧಾರ ಕೈಗೊಳ್ಳಲಿದೆ ಎಂದ ಅವರು, ನೀರಾವರಿ, ಭಾಗ್ಯಜ್ಯೋತಿ, ಕುಬೇರ ಜ್ಯೋತಿ ಸೇರಿದಂತೆ ಎಲ್ಲ ವಲಯಕ್ಕೂ ಮೀಟರ್ ಅಳವಡಿಸುವ ಕಾರ್ಯ ಕರಾವಳಿಯಿಂದ ಆರಂಭಿಸಲಾಗುವುದು ಎಂದರು.
ಕರ್ನಾಟಕ ವಿದ್ಯುತ್ ನಿಗಮದ ಅಧ್ಯಕ್ಷ ಜ್ಯೋತಿ ರಾಮಲಿಂಗಂ ಅವರಿಗೆ 135 ಕೋಟಿ ರುಪಾಯಿಗಳ ಬಾಕಿ ಮೊತ್ತದ ಚೆಕ್ ಅನ್ನು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಳಿಗಾರ್ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಎದುರಿಸುತ್ತಿರುವ ನಷ್ಟದ ಪ್ರಮಾಣ ತಗ್ಗಿಸಲು ವಿದ್ಯುತ್ ದರ ಏರಿಕೆ ಕ್ರಮ ಅನಿವಾರ್ಯವಾಗಿದೆ ಎಂದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications