ಉ.ಕ.ದಲ್ಲಿ ಹೈಕೋರ್ಟ್ ಪೀಠ, ಸರ್ಕಾರದ ಅಸಹಾಯಕತೆಗೆ ಕೃಷ್ಣ ವಿಷಾದ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ವಿಷಯದ ಕುರಿತು ರಾಜ್ಯ ಸರ್ಕಾರದ ಅಸಹಾಯಕತೆಗೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತೀವ್ರ ವಿಷಾದ ವ್ಯಕ್ತಪಡಿಸಿದ್ದು , ಉತ್ತರ ಕರ್ನಾಟಕದ ಜನತೆಯ ದೀರ್ಘ ಕಾಲದ ಈ ಒತ್ತಾಯ ಪ್ರಸ್ತುತ ಹೈಕೋರ್ಟ್ ಅಂಗಳದಲ್ಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಹೈಕೋರ್ಟ್‌ನಿಂದ ಸುಪ್ರಿಂಕೋರ್ಟ್‌ಗೆ ತೆರಳಿದ ನ್ಯಾಯಮೂರ್ತಿ ಪಿ.ವಿ.ರೆಡ್ಡಿ ಅವರು ತಮ್ಮ ನಿರ್ಗಮನಕ್ಕೆ ಮುನ್ನ ನ್ಯಾಯಮೂರ್ತಿಗಳ ಸಮಿತಿಯಾಂದು ಉತ್ತರ ಕರ್ನಾಟಕ ನ್ಯಾಯಪೀಠದ ವಿಷಯವನ್ನು ಗಮನಿಸುತ್ತಿರುವುದಾಗಿ ತಿಳಿಸಿದ ವಿಷಯವನ್ನು ಕೃಷ್ಣ ಬಹಿರಂಗಪಡಿಸಿದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನಾಗೇಂದ್ರ ಕುಮಾರ್ ಜೈನ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಮಾತನಾಡುತ್ತಿದ್ದರು.
ಹೈಕೋರ್ಟ್ ಪೀಠ ಸ್ಥಾಪನೆಯ ವಿಷಯವೀಗ ಹೈಕೋರ್ಟ್ ಅಂಗಳದಲ್ಲಿದೆ. ನ್ಯಾಯಮೂರ್ತಿ ಜೈನ್ ಅವರು ಈಗಷ್ಟೇ ಅಧಿಕಾರ ವಹಿಸಿಕೊಂಡಿರುವುದರಿಂದ ಸ್ವಲ್ಪಕಾಲ ಕಾಯೋಣ. ಪ್ರಾಮಾಣಿಕವಾಗಿ ಹೇಳುವುದಾದರೆ, ಹೈಕೋರ್ಟ್ ಪೀಠ ಸ್ಥಾಪನೆಯಲ್ಲಿ ರಾಜ್ಯ ಸರ್ಕಾರ ಮಾಡಲು ಉಳಿದಿರುವುದು ಅತ್ಯಲ್ಪ ಕಾರ್ಯ ಎಂದು ಕೃಷ್ಣ ತಿಳಿಸಿದರು.
ಅವಶ್ಯಬಿದ್ದಲ್ಲಿ ಉತ್ತರ ಕರ್ನಾಟಕ ಪ್ರದೇಶದಲ್ಲಿ ನ್ಯಾಯಪೀಠ ಸ್ಥಾಪಿಸುವ ಬಗೆಗೆ ಕೇಂದ್ರ ಸರ್ಕಾರ ಹಾಗೂ ಸುಪ್ರಿಂಕೋರ್ಟನ್ನು ಇನ್ನೊಮ್ಮೆ ಒತ್ತಾಯಿಸಲು ರಾಜ್ಯ ಸರ್ಕಾರ ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ದಲಿತ ಮಹಿಳೆಯ ಬೆತ್ತಲೆ ಮೆರವಣಿಗೆ ಅಮಾನುಷ
ಬಳ್ಳಾರಿ ಜಿಲ್ಲೆಯ ಒಣೇನೂರಿನಲ್ಲಿ ದಲಿತ ಮಹಿಳೆಯಾಬ್ಬಳ ಬೆತ್ತಲೆ ಮೆರವಣಿಗೆ ನಡೆಸಿರುವ ಕೃತ್ಯವನ್ನು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತೀವ್ರವಾಗಿ ಖಂಡಿಸಿದರು. ಭಾನುವಾರ ರಾತ್ರಿ ನಡೆದ ಈ ಹೇಯ ಕೃತ್ಯ ರಾಜ್ಯದ ಘನತೆಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ ಎಂದು ಕೃಷ್ಣ ಹೇಳಿದರು. ಆರೋಪಿಗಳಿಗೆ ಜಾಮೀನು ದೊರೆತ ಬಗೆಗೆ ಅವರು ವಿಷಾದ ವ್ಯಕ್ತಪಡಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications