ತೆರಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಬಿಸಿಸಿಐ ಮೊರೆ
ಚೆನ್ನೈ : ದೇಶದಲ್ಲಿನ ಅತ್ಯಂತ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ತನಗೆ ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿದೆ. ತೆರಿಗೆ ವಿನಾಯಿತಿ ನೀಡದಿದ್ದಲ್ಲಿ ಬಿಸಿಸಿಐ ಗಂಭೀರ ಆರ್ಥಿಕ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಎ.ಸಿ. ಮುತ್ತಯ್ಯ ಹೇಳಿದ್ದಾರೆ.
ಪ್ರಸ್ತುತ ಬಿಸಿಸಿಐ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದೆ. ಆದರೆ, ಸರ್ಕಾರ ತೆರಿಗೆ ವಿನಾಯಿತಿ ನೀಡದಿದ್ದಲ್ಲಿ ಮಂಡಳಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮುತ್ತಯ್ಯ ತಿಳಿಸಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಪ್ರಕರಣದ ನಿರ್ವಹಣೆ ಸೇರಿದಂತೆ ಕಳೆದೆರಡು ವರ್ಷಗಳಲ್ಲಿ ಮಂಡಳಿಯ ನಿರ್ವಹಣೆಯ ಬಗೆಗೆ ಹರ್ಷ ವ್ಯಕ್ತಪಡಿಸಿದ ಅವರು, ಮೂರನೇ ಬಾರಿಗೆ ಮಂಡಳಿಯ ಅಧ್ಯಕ್ಷತೆಗೆ ಸ್ಪರ್ಧಿಸುವ ಸುಳಿವು ನೀಡಿದರು.
ಮ್ಯಾಚ್ಫಿಕ್ಸಿಂಗ್ ಹಾಗೂ ಮೋಸದಾಟ ಕ್ರಿಕೆಟ್ಗೆ ಸಂಬಂಧಿಸಿದಂತೆ ನಾವು ಕಠಿಣ ಕ್ರಮಗಳನ್ನು ಕೈಗೊಂಡೆವು ಎಂದು ಹೇಳಿದ ಅವರು, ಕಳಂಕಿತ ಆಟಗಾರರೊಡನೆ ನ್ಯಾಯಾಲಯದ ಹೊರಗೆ ಮಂಡಳಿ ಒಪ್ಪಂದ ಮಾಡಿಕೊಂಡಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ರೊಟೇಷನ್ ಪದ್ಧತಿ ಹಾಗೂ ದೇಶೀಯ ಪಂದ್ಯಗಳಲ್ಲಿ ಹಿರಿಯ ಆಟಗಾರರು ಆಡುವುದನ್ನು ಕಡ್ಡಾಯಗೊಳಿಸಿರುವುದು ತಮ್ಮ ಅಧಿಕಾರಾವಧಿಯ ಇತರ ಪ್ರಮುಖ ನಿರ್ಣಯಗಳೆಂದು ಎಂದು ಮುತ್ತಯ್ಯ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications