ಹುಬ್ಬಳ್ಳಿ, ಬೆಳಗಾವಿಗೆ ಮತ್ತೆ ವಿಮಾನಹಾರಿಸಲು ಮುಖ್ಯಮಂತ್ರಿ ಪಟ್ಟು
ಬೆಂಗಳೂರು : ರಾಜ್ಯದಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕೋದ್ಯಮದ ಅಭಿವೃದ್ಧಿಗಾಗಿ ಉತ್ತರ ಕರ್ನಾಟದ ಕೆಲವು ಜಿಲ್ಲೆಗಳಲ್ಲಿ ವಿಮಾನ ಯಾನ ಪ್ರಾರಂಭಿಸಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾತುರರಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ನಾಗರಿಕ ವಿಮಾನ ಸಚಿವಾಲಯದ ಕಾರ್ಯದರ್ಶಿ ಎ.ಎಚ್.ಜಂಗ್ ಅವರೊಟ್ಟಿಗೆ ಇತ್ತೀಚೆಗೆ ಚರ್ಚೆಯನ್ನೂ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಗೆ ಸಾಕಷ್ಟು ಹಣ ಸಂಗ್ರಹಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ಬಳಕೆದಾರರಿಗೆ 100 ರುಪಾಯಿ ಶುಲ್ಕ ವಿಧಿಸಲು ಇನ್ನೊಂದು ತಿಂಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ಕೊಡುವುದಾಗಿ ಜಂಗ್ ಭರವಸೆ ಕೊಟ್ಟರು. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಜಯರಾಂ ರಮೇಶ್ ಜೊತೆಯಲ್ಲಿ ಮುಖ್ಯಮಂತ್ರಿ ಕೃಷ್ಣ , ಜಂಗ್ ಅವರೊಟ್ಟಿಗೆ ಮಾತುಕತೆ ನಡೆಸಿದರು. ಐತಿಹಾಸಿಕ ಸ್ಥಳಗಳಾದ ಹಂಪಿ, ಬಿಜಾಪುರ ಹಾಗೂ ಗಣಿ ಉದ್ಯಮದ ಮೂಲಗಳನ್ನು ಹುದುಗಿಸಿಟ್ಟಿಕೊಂಡಿರುವ ಬಳ್ಳಾರಿಯಂಥಾ ಕೈಗಾರಿಕಾ ಪ್ರದೇಶಗಳು ಬೆಳಗಾವಿ ಮತ್ತು ಹುಬ್ಬಳ್ಳಿಗೆ ಹತ್ತಿರದಲ್ಲಿವೆ. ಹೀಗಾಗಿ ಪ್ರವಾಸೋದ್ಯಮ ಹಾಗೂ ಕೈಗಾರಿಕೋದ್ಯಮದ ಪ್ರಗತಿಗೆ ಬೆಳಗಾವಿ ಮತ್ತು ಹುಬ್ಬಳ್ಳಿಗಳಿಗೂ ವಿಮಾನ ಯಾನ ಪ್ರಾರಂಭಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಬೆಳಗಾವಿ ಮತ್ತು ಹುಬ್ಬಳ್ಳಿಗೆ ವಿಮಾನ ಸಂಚಾರ ಪ್ರಾರಂಭಿಸುವ ನಿಟ್ಟಿನಲ್ಲಿ ಜಂಗ್ 3 ಆಯ್ಕೆಗಳನ್ನು ಹೇಳಿದರು. ಅವೆಂದರೆ-
- 50 ಸೀಟುಗಳ ವಿಮಾನವನ್ನು ರಾಜ್ಯ ಸರ್ಕಾರ ತನ್ನ ವ್ಯಾಪ್ತಿಗೆ ತಂದುಕೊಳ್ಳುವುದು (ಯುಪಿ ಏರ್ ಮತ್ತು ಗುಜರಾತ್ ಸರ್ಕಾರಗಳು ಈ ರೀತಿಯ ವಿಮಾನ ಸಂಚಾರ ಪ್ರಾರಂಭಿಸಿವೆ).
- ತನೇಜ ಏರ್‌ವೇಸ್ ಅಥವಾ ಜೆಟ್ ಏರ್‌ವೇಸ್‌ನಂಥಾ ಖಾಸಗಿ ಸಂಸ್ಥೆಗಳೊಡನೆ ಜಂಟಿ ಒಪ್ಪಂದ ಮಾಡಿಕೊಳ್ಳುವುದು.
- ಇಂಡಿಯನ್ ಏರ್‌ಲೈನ್ಸ್‌ನ ಸಬ್‌ಸಿಡರಿಯಾದ ಅಲಯನ್ಸ್ ಏರ್‌ನ ಮೂಲಕ ವಿಮಾನ ಯಾನ ಪ್ರಾರಂಭಿಸುವುದು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications