ಬೆಳಗಾವಿ, ಮಂಡ್ಯಕ್ಕೆ ಸುಧಾರಿತ ವಿದ್ಯುತ್ವ್ಯವಸ್ಥೆ : ಕೇಂದ್ರ ಸಚಿವ
ಪುತ್ತೂರು : ಕರ್ನಾಟಕ ರಾಜ್ಯದ ವಿದ್ಯುತ್ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಕಳೆದ ವರ್ಷ 200 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇ.ಸಿ.ಡಿ.ಸಿ. ಯೋಜನೆಯಡಿ ಈಗ ಬೆಳಗಾವಿ ಹಾಗೂ ಮಂಡ್ಯದಲ್ಲಿ ಪೂರ್ಣ ಪ್ರಮಾಣದ ಸುಧಾರಿತ ವಿದ್ಯುತ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.
ಈ ವಿಷಯವನ್ನು ಕೇಂದ್ರ ಇಂಧನ ಹಾಗೂ ಪರಿಸರ ಖಾತೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಉತ್ತಮ ಗುಣಮಟ್ಟದ ತಾಂತ್ರಿಕ ವ್ಯವಸ್ಥೆಯಾಂದಿಗೆ ವಿದ್ಯುತ್ ವ್ಯವಸ್ಥೆಯ ಅಭಿವೃದ್ಧಿಗೆ ಕೇಂದ್ರ ನೆರವು ನೀಡಲಿದೆ ಎಂದರು.
ರಾಜ್ಯದಲ್ಲಿ ಹೈಡ್ರೋ ಮತ್ತು ಮಿನಿ ಹೈಡ್ರೋ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಿ, ವಿದ್ಯುತ್ ಕೊರತೆ ನೀಗಿಸಬೇಕು. ವಿದ್ಯುತ್ ವ್ಯವಸ್ಥೆಯನ್ನು ನಡೆಸಲು ರಾಜ್ಯದಕ್ಕೆ ಸಾಧ್ಯವಾಗದಿದ್ದರೆ, ಕೇಂದ್ರವೇ ಹೈಡ್ರೋ ವಿದ್ಯುತ್ ಯೋಜನೆಗಳನ್ನು ಪೂರ್ಣವಾಗಿ ಅಭಿವೃದ್ಧಿ ಪಡಿಸಿ ಜನತೆಗೆ ನೀಡುವುದು ಎಂದು ಅವರು ಹೇಳಿದರು.
ವಿಜಯ ನಗರದಲ್ಲಿ ಈಗಾಗಲೇ ಇಂತಹ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದೂ ಅವರು ಹೇಳಿದರು. ಮಿನಿ ಹೈಡ್ರೋ ವಿದ್ಯುತ್ ಯೋಜನೆಗಳು ವಿದ್ಯುತ್ ಕೊರತೆ ನೀಗಿಸುವಲ್ಲಿ ವರದಾನವಾಗಿವೆ ಎಂದೂ ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಡಿ.ವಿ. ಸದಾನಂದ ಗೌಡ, ಮಂಗಳೂರು ಶಾಸಕ ಯೋಗೀಶ್ ಭಟ್, ಮಾಜಿ ಶಾಸಕ ಕೆ. ರಾಮಭಟ್ ಮೊದಲಾದವರು ಉಪಸ್ಥಿತರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications