ಅಂಕೋಲಾ - ಶಿರಸಿಯಲ್ಲಿ ರ್ಯಾಟ್ ಫೀವರ್ಗೆ 10 ಜನರ ಬಲಿ
ಕಾರವಾರ : ಕಳೆದ ಒಂದು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಹಾಗೂ ಶಿರಸಿಯಲ್ಲಿ ರ್ಯಾಟ್ ಫೀವರ್ ಮತ್ತು ನಿಮೋನಿಯಾಕ್ಕೆ ಹತ್ತು ಜನರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಅಂಕೋಲ ತಾಲೂಕಿನ ಬಡಗೇರಿ ಹಾಗೂ ಬೆಳಂಬಾರದ ತಾಳಬೈಲ್ಗಳಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಂಡಿದೆ. ರೋಗಕ್ಕೆ ತಾಳೆಬೈಲಿನ ಮೂವರು ಹಾಗೂ ಬಡಗೇರಿಯ ಐವರು ಬಲಿಯಾಗಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳ ಪ್ರಕಾರ ಅಂಕೋಲ ಹಾಗೂ ಶಿರಸಿಯಲ್ಲಿ ಸತ್ತವರು ನಿಮೋನಿಯಾ ಪೀಡಿತರೇ ವಿನಾ ಇಲಿ ಜ್ವರಕ್ಕೆ ತುತ್ತಾದವರಲ್ಲ.
ಆದರೆ, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಕೋಲ ತಾಲೂಕಿನ ಮಧುಕೇಶ್ವರ ಬಾಬುರಾಯ ನಾಯ್ಕ ಅವರಿಗೆ ಮಾತ್ರ ಇಲಿ ಜ್ವರ ಇರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜ್ವರದಿಂದ ಬಳಲುತ್ತಿರುವವರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಕೆಲವು ರಕ್ತದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೂ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications