ರಾಜ್ಯದ 23 ವೈದ್ಯಕಾಲೇಜುಗಳ ಸೀಟು ಹೆಚ್ಚಳಕ್ಕೆಸಂಪುಟದ ಶಿಫಾರಸು
ಬೆಂಗಳೂರು : ರಾಜ್ಯದ 23 ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ, ಫಾರ್ಮಸಿ ಹಾಗೂ ನರ್ಸಿಂಗ್ ಸೀಟುಗಳನ್ನು ಹೆಚ್ಚಿಸುವಂತೆ ರಾಜ್ಯ ಸಚಿವ ಸಂಪುಟವು ಭಾರತೀಯ ವೈದ್ಯ ಮಂಡಳಿ (ಐಎಂಸಿ)ಗೆ ಶಿಫಾರಸು ಮಾಡಲು ತೀರ್ಮಾನ ಕೈಗೊಂಡಿದೆ.
ಗೃಹ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟದ ಉಪ ಸಮಿತಿಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ವಿಷಯವನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ. ಚಂದ್ರೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ದಾವಣಗೆರೆ ಮೆಡಿಕಲ್ ಕಾಲೇಜ್- 13, ಕೆಂಪೇಗೌಡ ಮೆಡಿಕಲ್ ಕಾಲೇಜ್- 12, ಅಲ್ ಅಮೀನ್ ಮೆಡಿಕಲ್ ಕಾಲೇಜ್- 7, ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜ್- 6, ಸೇಂಟ್ಜಾನ್ಸ್ ಮೆಡಿಕಲ್ ಕಾಲೇಜ್- 8, ಕಸ್ತೂರಬಾ ಮೆಡಿಕಲ್ ಕಾಲೇಜ್- 4, ಮಣಿಪಾಲ್ ಮೆಡಿಕಲ್ ಕಾಲೇಜ್ -4, ಕ್ಯಾಪಿಟಲ್ ಎಜುಕೇಷನ್ ಸೊಸೈಟಿ -4, ನಾಡಗೌಡ ಮೆಡಿಕಲ್ ಕಾಲೇಜ್ -7, ಎಂ.ಎಸ್. ರಾಮಯ್ಯ -8, ಅಲ್ ಬದೂರ್ ಮೆಡಿಕಲ್ ಕಾಲೇಜ್ -4, ಜೆ.ಎಸ್.ಎಸ್ -9, ಬಾಗಲಕೋಟೆ ಮೆಡಿಕಲ್ ಕಾಲೇಜಿನಲ್ಲಿ 3 ಸೀಟುಗಳು ಸೇರಿದಂತೆ ಒಟ್ಟು 105 ಸ್ನಾತಕೋತ್ತರ ವೈದ್ಯ ಸೀಟುಗಳ ಹೆಚ್ಚಳಕ್ಕೆ ವೈದ್ಯ ಮಂಡಳಿಗೆ ಶಿಫಾರಸು ಮಾಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೆ ಅರುಣ ಎಜುಕೇಷನ್ ಸೊಸೈಟಿಯಲ್ಲಿ 30 ಮತ್ತು ಆದಿ ಜಾಂಬವ ಶಿಕ್ಷಣ ಸಂಸ್ಥೆಯಲ್ಲಿ 36 ನರ್ಸಿಂಗ್ ಸೀಟು, ಕೊರಟಗೆರೆ ಶಿಕ್ಷಣ ಸಂಸ್ಥೆಯಲ್ಲಿ 40 ಫಾರ್ಮಸಿ ಸೀಟು ಹೆಚ್ಚಳಕ್ಕೆ ಶಿಫಾರಸು ಮಾಡಲಾಗುವುದು ಎಂದೂ ಸಚಿವರು ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications