ಕರ್ನಾಟಕ- ದಕ್ಷಿಣ ಕೊರಿಯಾ ನಡುವೆ ಮಹತ್ವದ ಉದ್ದಿಮೆ ಒಪ್ಪಂದ
ಬೆಂಗಳೂರು : ಭಾರತ ಮಾಹಿತಿ ತಂತ್ರಜ್ಞಾನದ ಸೂಪರ್ಪವರ್ ಎಂದು ನಗರಕ್ಕೆ ಬಂದಿರುವ ದಕ್ಷಿಣ ಕೊರಿಯಾದ ಉನ್ನತ ಮಟ್ಟದ ಸಮಿತಿ ಬುಧವಾರ ಹೊಗಳಿದೆ.
ಕರ್ನಾಟಕ ವಾಣಿಜ್ಯ ಮತ್ತು ಉದ್ದಿಮೆ ಒಕ್ಕೂಟ (ಎಫ್ಕೆಸಿಸಿಐ)ದ ಸಭೆಯಲ್ಲಿ ಭಾಗವಹಿಸಿದ್ದ ಕೊರಿಯಾ ಅಂತರರಾಷ್ಟ್ರೀಯ ಉದ್ದಿಮೆ ಒಕ್ಕೂಟ (ಕೆಐಟಿಎ) ದ ಅಧ್ಯಕ್ಷ ಜಾ ಚುಲ್ ಕಿಮ್, ಬೆಂಗಳೂರು ಭಾರತದ ಐಟಿ ಮೆಕ್ಕಾ ಎಂದು ಬಣ್ಣಿಸಿದರು. ಇದೇ ಸಂದರ್ಭದಲ್ಲಿ ಎಫ್ಕೆಸಿಸಿಐ ಹಾಗೂ ಕೆಐಟಿಎ ಪರಸ್ಪರ ಒಡಂಬಡಿಕೆಯಾಂದಕ್ಕೆ ಸಹಿ ಹಾಕಿದವು. ಇದರಿಂದ ಕರ್ನಾಟಕ ಹಾಗೂ ದಕ್ಷಿಣ ಕೊರಿಯಾ ನಡುವೆ ಬಂಡವಾಳ ಹರಿಯಲಿದ್ದು, ಉದ್ದಿಮೆ ಅಭಿವೃದ್ಧಿಗೆ ಸಹಾಯಕವಾಗಲಿದೆ.
ಮಾಹಿತಿ ತಂತ್ರಜ್ಞಾನ, ಇಲೆಕ್ಟ್ರಾನಿಕ್ಸ್, ಜೈವಿಕ ತಂತ್ರಜ್ಞಾನ, ಆರೋಗ್ಯ ಸಂರಕ್ಷಣೆ, ಎಂಜಿನಿಯರಿಂಗ್ ಉತ್ಪನ್ನಗಳು, ಔಷಧಿಗಳು, ಶಿಕ್ಷಣ, ಪ್ರವಾಸೋದ್ಯಮ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಪರಿಸರ ಕ್ಷೇತ್ರಗಳಿಗೆ ಕರ್ನಾಟಕ ಹಾಗೂ ದಕ್ಷಿಣ ಕೊರಿಯಾ ನಡುವಣ ಒಪ್ಪಂದ ಅನ್ವಯವಾಗಲಿದೆ.
ಸಭೆಗೆ ಮುನ್ನ ದಕ್ಷಿಣ ಕೊರಿಯಾದ ಪ್ರತಿನಿಧಿಗಳು ನಗರದ ಉದ್ದಿಮೆದಾರರೊಡನೆ ಮುಖಾಮುಖಿ ಭೇಟಿ ನಡೆಸಿ, ವ್ಯಾಪಾರದ ಅವಕಾಶ, ಹೂಡಿಕೆಯ ಸಾಧ್ಯತೆಗಳನ್ನು ಮನವರಿಕೆ ಮಾಡಿಕೊಂಡರು.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications