ವಿದ್ಯುತ್ ಕ್ಷೇತ್ರದ ಸುಧಾರಣೆಗೆ ಬದ್ಧ : ಮುಖ್ಯಮಂತ್ರಿ ಕೃಷ್ಣ ಘೋಷಣೆ
ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿನ ಸುಧಾರಣೆಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮದ 31ನೇ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ತಾನು ಕೊಂಡ ವಿದ್ಯುತ್ತಿಗೆ ಪೂರ್ಣ ಹಣ ಪಾವತಿ ಮಾಡದ ಹೊರತು ಕೆಪಿಟಿಸಿಎಲ್ನ ಪರಿಸ್ಥಿತಿ ಸುಧಾರಣೆಯಾಗುವುದು ಕಷ್ಟ ಎಂದು ಅಭಿಪ್ರಾಯಪಟ್ಟರು.
ಆದಾಗ್ಯೂ ವಿದ್ಯುತ್ ನಿಯಂತ್ರಣ ಆಯೋಗ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿದ್ಯುತ್ ಕ್ಷೇತ್ರದ ಸುಧಾರಣೆಗಾಗಿ ರಾಜ್ಯ ಸರಕಾರ ವಿಶ್ವಬ್ಯಾಂಕ್ ನೆರವಿನಿಂದ ಪಡೆದ ಮೊದಲ ಕಂತಿನ 279 ಕೋಟಿ ರುಪಾಯಿ ಸಾಲವನ್ನು ಕೆಪಿಟಿಸಿಎಲ್ ಹಾಗೂ ವಿದ್ಯುತ್ ನಿಗಮಕ್ಕೆ ಬಿಡುಗಡೆ ಮಾಡಿದೆ.
ಕೆ.ಪಿ.ಟಿ.ಸಿ.ಎಲ್. ಸುಧಾರಣೆಗೊಳ್ಳುವುದರ ಜೊತೆಗೆ ಜನತೆಯ ಆಶೋತ್ತರಗಳನ್ನು ಪೂರೈಸಲಿದೆ ಎಂಬ ವಿಶ್ವಾಸ ತಮಗಿದೆ ಎಂದರು. ಜಲಾಶಯಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಉಂಟಾಗಿರುವ ಮಳೆಯ ಅಭಾವದಿಂದಾಗಿ ಮುಂಬರುವ ದಿನಗಳು ವಿದ್ಯುತ್ ಕ್ಷೇತ್ರಕ್ಕೆ ಆಶಾದಾಯಕವಾಗಿಲ್ಲ ಎಂದೂ ಕೃಷ್ಣ ಹೇಳಿದರು.
7ನೇ ಘಟಕ : ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್.ಟಿ.ಪಿ.ಎಸ್) ಏಳನೇ ಘಟಕದ ಕಾಮಗಾರಿ ಕಳೆದ ವರ್ಷ ಅಕ್ಟೋಬರ್ 10ರಿಂದ ಆರಂಭವಾಗಿದ್ದು, 2003ರ ಏಪ್ರಿಲ್ ಹೊತ್ತಿಗೆ ಕಾರ್ಯಾರಂಭ ಮಾಡಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications