‘ನ್ಯೂಯಾರ್ಕ್‌ಗೆ ಹೋಗುವ ಮುನ್ನ ಹೋಂವರ್ಕ್ ಮಾಡಿ ಅಟಲ್‌ಜೀ’
ಕಾನ್ಪುರ : ನ್ಯೂಯಾರ್ಕ್‌ನಲ್ಲಿ ಮತ್ತೊಮ್ಮೆ ಮುಷರ್ರಫ್ ಅವರೊಂದಿಗೆ ಮಾತುಕತೆ ನಡೆಸುವ ಮುನ್ನ ಒಂದಿಷ್ಟು ಪೂರ್ವ ತಯಾರಿ ಮಾಡಿಕೊಳ್ಳಿ ಎಂದು ಹಾಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾಜಿ ಪ್ರಧಾನಿ ವಿ.ಪಿ. ಸಿಂಗ್ ಸಲಹೆ ಮಾಡಿದ್ದಾರೆ.
ನ್ಯೂಯಾರ್ಕ್‌ನಲ್ಲಿ ನಡೆಯುವ ಮಾತುಕತೆಗಳು ಕೂಡ ಮತ್ತೊಂದು ಆಗ್ರಾ ಶೃಂಗಸಭೆಯಂತೆ ಆಗಬಾರದು. ಈ ನಿಟ್ಟಿನಲ್ಲಿ ಸಾಕಷ್ಟು ಹೋಂವರ್ಕ್ ಮಾಡಿಕೊಂಡರೆ ಉತ್ತಮ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆ ಮುಂದುವರಿಸುವುದನ್ನು ನಾವೂ ಬೆಂಬಲಿಸುತ್ತೇವೆ ಆದರೆ, ಪೂರ್ವ ತಯಾರಿ ಇಲ್ಲದೆ ಮಾತುಕತೆಗೆ ಇಳಿಯಬಾರದು ಎಂದು ಅವರು ಹೇಳಿದ್ದಾರೆ.
ಜಮ್ಮು - ಕಾಶ್ಮೀರದಲ್ಲಿ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಸುವ ಬಗೆಗಿನ ಪ್ರಧಾನಮಂತ್ರಿಗಳ ಕಳಕಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ವಿ.ಪಿ. ಸಿಂಗ್ ‘ಕೇವಲ ಕಳಕಳಿ ಇದ್ದರೆ ಸಾಲದು, ಅದಕ್ಕೆ ಪರಿಹಾರ ಹುಡುಕಬೇಕು’ ಎಂದರು. ಅಟಲ್‌ಜೀ ಬಳಿ ಸಧ್ಯಕ್ಕೆ ಅದಕ್ಕೆ ಪರಿಹಾರವಿಲ್ಲ ಎಂದೂ ಅವರು ಹೇಳಿದರು.
ಅಂತಿಮ ಸಿದ್ಧತೆ: (ದೆಹಲಿ ವರದಿ) ಈ ತಿಂಗಳ ಕೊನೆಯಲ್ಲಿ ಪ್ರಧಾನಿ ವಾಜಪೇಯಿ ಅವರು, ಅಮೆರಿಕದ ಅಧ್ಯಕ್ಷ ಜಾರ್ಜ್ ಬುಷ್ ಅವರನ್ನು ಭೇಟಿ ಮಾಡಲಿದ್ದು, ಅದಕ್ಕಾಗಿ ಅಂತಿಮ ಕಾರ್ಯಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಅಟಲ್- ಬುಷ್ ಭೇಟಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ ಎಂದು ವಿದೇಶಾಂಗ ಖಾತೆ ವಕ್ತಾರರು ತಿಳಿಸಿದ್ದಾರೆ.
ವಾಜಪೇಯಿ ಅವರು ನ್ಯೂಯಾರ್ಕ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ ಅಭಿವೃದ್ಧಿಶೀಲ ಪ್ರಜಾಸತ್ತಾತ್ಮಕ ರಾಷ್ಟ್ರಗಳಿಗಾಗಿಯೇ ಔತಣ ಕೂಟವೊಂದನ್ನು ಏರ್ಪಡಿಸುವ ಪ್ರಸ್ತಾವನೆಯನ್ನು ಜಾರ್ಜ್ ಬುಷ್ ಮಂಡಿಸಿದ್ದಾರೆ ಎಂಬ ಸುದ್ದಿಗಳಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ವಕ್ತಾರರು ಮೇಲಿನಂತೆ ಉತ್ತರಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications