ಕ್ಯಾರಿಓವರ್ ಪದ್ಧತಿ ರದ್ದತಿಗೆ ಬೆಂಗಳೂರು ವಿಶ್ವ ವಿದ್ಯಾಲಯ ನಿರ್ಧಾರ
ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾಲಯದ ಪದವಿ ತರಗತಿಗಳಲ್ಲಿ ಕ್ಯಾರಿ ಓವರ್ ಪದ್ಧತಿಯನ್ನು ರದ್ದು ಪಡಿಸಲು ನಿರ್ಧರಿಸಲಾಗಿದೆ.
ಈ ನಿರ್ಧಾರದ ಪ್ರಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿಯ ಪ್ರಥಮ ಪದವಿಯಲ್ಲಿ ಕನಿಷ್ಠ ಎರಡು ವಿಷಯಗಳಲ್ಲಿ ತೇರ್ಗಡೆ ಹೊಂದಿದವರು ದ್ವಿತೀಯ ಪದವಿಗೆ ಹಾಗೂ ಪ್ರಥಮ ಪದವಿಯ ಎಲ್ಲ ವಿಷಯಗಳಲ್ಲಿ ತೇರ್ಗಡೆ ಹೊಂದಿದವರು ಅಂತಿಮ ಪದವಿಗೆ ಪ್ರವೇಶ ಪಡೆಯುತ್ತಾರೆ.
ಬುಧವಾರ, ಬೆಂಗಳೂರು ವಿವಿಯ ಶೈಕ್ಷಣಿಕ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಮಂಡಿಸಿದ ಈ ನಿರ್ಣಯಕ್ಕೆ ಬಹುಮತದ ಒಪ್ಪಿಗೆ ದೊರಕಿತು. ಈ ಪದ್ಧತಿಯು ಮುಂದಿನ ವರ್ಷ ಪ್ರಥಮ ಪದವಿಗೆ ಸೇರುವ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ.
ನಿರ್ಣಯ ಮಂಡಿಸಿದ ಸದಸ್ಯ ಎಂ.ಬಸವರಾಜಯ್ಯ ಅವರು, ಪ್ರಸ್ತುತ ಜಾರಿಯಲ್ಲಿರುವ ಕ್ಯಾಪರಿಓವರ್ ಪದ್ಧತಿಯ ಪ್ರಕಾರ ವಿದ್ಯಾರ್ಥಿಯು ಯಾವ ವರ್ಷದಲ್ಲಿ ಎಷ್ಟೇ ವಿಷಯಗಳನ್ನು ಬಾಕಿ ಉಳಿಸಿಕೊಂಡಿದ್ದರೂ ಅಂತಿಮ ಪದವಿಯವರೆಗೆ ಯಾವುದೇ ಕಡಿವಾಣವಿಲ್ಲದೇ ಮುಂದುವರೆಯಬಹುದಾಗಿತ್ತು. ಇದರಿಂದ ಬಹುತೇಕ ವಿದ್ಯಾರ್ಥಿಗಳು ಅಂತಿಮ ಪದವಿಯಲ್ಲಿ ಹೆಚ್ಚು ವಿಷಯಗಳನ್ನು ಬಾಕಿ ಉಳಿಸಿಕೊಂಡು ಮಾನಸಿಕವಾಗಿ ತೊಳಲಾಡುತ್ತಾರೆ. ಹೊಸ ಪದ್ಧತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications