ದೇಶದ ಬರಪೀಡಿತ ಪ್ರದೇಶಗಳಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
ಬೆಂಗಳೂರು : ಕೇಂದ್ರ ಸರ್ಕಾರದಿಂದ ಹೆಚ್ಚಿನ ಪ್ರಮಾಣದ ಆಹಾರ ಧಾನ್ಯ ಪಡೆದು ಬಡವರಿಗೆ ವಿತರಿಸುವ ಕ್ರಿಯಾ ಯೋಜನೆಯಾಂದನ್ನು ರಾಜ್ಯ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಖಾತೆಯ ರಾಜ್ಯ ಸಚಿವ ಡಿ.ಬಿ.ಇನಾಂದಾರ್ ತಿಳಿಸಿದ್ದಾರೆ.
ರಾಜ್ಯದ ರೈತರು ಬೆಳೆಗಾಗಿ ಮಳೆಯನ್ನೇ ನಂಬಿಕೊಂಡಿದ್ದಾರೆ. ದೇಶದ ಬರಗಾಲ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಇನಾಂದಾರ್ ಹೇಳಿದರು. ರಾಜ್ಯದ 175 ತಾಲ್ಲೂಕುಗಳ ಪೈಕಿ 147 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿದ್ದು , ಈ ಭಾಗದ ಜನತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.
ಸಂಪೂರ್ಣ ಗ್ರಾಮೀಣ ರೋಜಗಾರ್ ಯೋಜನೆಯಡಿಯಲ್ಲಿ 10 ಸಾವಿರ ಕೋಟಿ ರುಪಾಯಿ ಮೌಲ್ಯದ ಆಹಾರ ಧಾನ್ಯಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು , ಇದರಲ್ಲಿ ಹೆಚ್ಚಿನ ಪಾಲನ್ನು ರಾಜ್ಯ ಸರ್ಕಾರ ಅಪೇಕ್ಷಿಸುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಒದಗಿಸಿದ್ದ 1 ಲಕ್ಷ ಟನ್ ಆಹಾರ ಧಾನ್ಯಗಳನ್ನು ಬರ ಪೀಡಿತ ಜನರಿಗೆ ವಿತರಿಸಲಾಗಿದೆ ಎಂದು ಇನಾಂದಾರ್ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications