ಜನಮತ ಸಂವಿಧಾನದ ಸವಾರಿಗೆ ಅವಕಾಶ ಕಲ್ಪಿಸುವುದಿಲ್ಲ-ಸುಪ್ರಿಂಕೋರ್ಟ್
ನವದೆಹಲಿ : ಜನ ಪ್ರತಿನಿಧಿಗಳ ಅಧಿಕಾರ ವ್ಯಾಪ್ತಿಯ ಕುರಿತು ಸರ್ವೋಚ್ಛ ನ್ಯಾಯಾಲಯ ಗುರುವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು , ಸಂವಿಧಾನದ ಮೇಲೆ ಸವಾರಿ ಮಾಡಲು ಯಾವುದೇ ವ್ಯಕ್ತಿಗೆ ಜನಮತ ಅಧಿಕಾರ ಕಲ್ಪಿಸಿಕೊಡುವುದಿಲ್ಲ ಎಂದು ಹೇಳಿದೆ.
ತಮಿಳುನಾಡು ಮುಖ್ಯಮಂತ್ರಿಯಾಗಿ ಜೆ.ಜಯಲಲಿತಾ ಅವರು ನೇಮಕಗೊಂಡಿರುವ ಕುರಿತು ಪರ ವಿರೋಧ ವಾದಗಳನ್ನು ಆಲಿಸಿದ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು. ಇದಕ್ಕೂ ಮುನ್ನ ಜಯಲಲಿತಾ ಅವರ ವಕೀಲರಾದ ಕೆ.ಕೆ.ವೇಣುಗೋಪಾಲ್ ಅವರು ನ್ಯಾಯಪೀಠಕ್ಕೆ ಸಲ್ಲಿಸಿದ್ದ ತಮ್ಮ ಹೇಳಿಕೆಯಲ್ಲಿ - ‘ತಮಿಳುನಾಡಿನ ಜನತೆ ಎಐಎಡಿಎಂಕೆ ಪಕ್ಷಕ್ಕೆ ಬಹುಮತ ನೀಡಿದ್ದು , ಪಕ್ಷದ ನಾಯಕಿಯಾದ ಜಯಲಲಿತಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಯಲಲಿತಾ ಅವರಿಗೆ ಶಾಸಕರ ಬೆಂಬಲ ಇರುವುದನ್ನು ಮನಗಂಡಿದ್ದರಿಂದಲೇ ರಾಜ್ಯಪಾಲೆ ಫಾತಿಮಾ ಬೀವಿ ಅವರು ಜಯಲಲಿತಾ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು’ ಎಂದು ತಿಳಿಸಿದ್ದರು.
ಜಯಲಲಿತಾ ಅವರನ್ನು ಆಹ್ವಾನಿಸುವ ಬದಲು ರಾಜ್ಯಪಾಲರು ಇತರ ಕ್ರಮಗಳ ಕುರಿತು ಯೋಚಿಸಿದ್ದಲ್ಲಿ ಅದು ಜನತೆಯ ಸೋಲಾಗುತ್ತಿತ್ತು ಎಂದೂ ವೇಣುಗೋಪಾಲ್ ವಾದಿಸಿದ್ದರು.
ಜಯಲಲಿತಾ ಪರ ವಾದವನ್ನು ಆಲಿಸಿದ ನ್ಯಾಯಪೀಠ ವೇಣುಗೋಪಾಲ್ ಅವರಿಗೆ ತಮ್ಮ ಮಾತುಗಳನ್ನು ಪುನಃ ಪರಿಶೀಲಿಸುವಂತೆ ಸೂಚಿಸಿತು. ನಾವು ಸಂವಿಧಾನದ ಪ್ರಕಾರ ನಡೆಯ್ತುತೇವೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯಾಬ್ಬರನ್ನು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸುವ ಕ್ರಮವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಐವರು ಸದಸ್ಯರ ನ್ಯಾಯಪೀಠ ಹೇಳಿದೆ.
‘ಜನತೆಯೇ ಸರ್ವೋಚ್ಛ’ ಎನ್ನುವ ವೇಣುಗೋಪಾಲ್ ಅವರ ಮಾತನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಭರೂಚ ಅವರು, ‘ಈ ಮಾತನ್ನು ನಾವೂ ಒಪ್ಪುತ್ತೇವೆ. ಆದರೆ, ಪ್ರಸ್ತುತ ಪ್ರಕರಣದಲ್ಲಿ ಸಂವಿಧಾನವನ್ನು ಅನುಕೂಲಕ್ಕೆ ತಕ್ಕಂತೆ ತಿರುಚಲಾಗಿದೆ. ಜಯಲಲಿತಾ ಅವರು ತಮ್ಮ ಮೇಲಿನ ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಕಾಯಬೇಕಿತ್ತು . ಇಲ್ಲಿ ನಾವಿರುವುದು ನಿಮ್ಮ ಹೇಳಿಕೆಗಳನ್ನು ಕೇಳಲೇ ಹೊರತು ಜನರದ್ದಲ್ಲ . ಈ ರೀತಿಯ ಧೋರಣೆಗಳು ಅಪಾಯಕಾರಿ’ ಎಂದು ಕಟುವಾಗಿ ನುಡಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications