ಗುಣಮಟ್ಟ ಶಿಕ್ಷಣ ನೀಡಲು ಬೆಂಗಳೂರು ವಿವಿ- ವರ್ಲ್ಡ್‌ಸ್ಪೇಸ್ ಕೈಜೋಡಣೆ
ಬೆಂಗಳೂರು : ಉಪಗ್ರಹ ಸಂಪರ್ಕ ಹಾಗೂ ವಿವಿಧ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗಾಗಿ ಅಮೆರಿಕಾ ಮೂಲದ ವರ್ಲ್ಡ್‌ಸ್ಪೇಸ್ ಕಾರ್ಪೊರೇಷನ್ ಭಾರತದಲ್ಲಿ ಸಾಕಷ್ಟು ಮಿಲಿಯನ್ ಡಾಲರ್ ಬಂಡವಾಳ ಹೂಡಲಿದೆ.
ವರ್ಲ್ಡ್‌ಸ್ಪೇಸ್‌ನ ಸಿಇಓ ನೋ ಎ ಸಮರ ಗುರುವಾರ ನಗರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಉಪಗ್ರಹದ ಮೂಲಕ ಗುಣಮಟ್ಟ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದೊಟ್ಟಿಗೆ ಒಡಂಬಡಿಕೆಯಾಂದಕ್ಕೆ ಸಹಿ ಹಾಕಿದ ಸಮರ, ಭಾರತ ದೊಡ್ಡ ಮಾರುಕಟ್ಟೆ. ವಾಣಿಜ್ಯ ಹಾಗೂ ಸಾಮಾಜಿಕ ಕಳಕಳಿ ದೃಷ್ಟಿಯಿಂದ ಇಲ್ಲಿ ಸಾಕಷ್ಟು ಬಂಡವಾಳ ಹೂಡಲು ನಾವು ಉತ್ಸುಕರಾಗಿದ್ದೇವೆ ಎಂದರು.
ಭಾರತದಲ್ಲಿ 30 ದಶಲಕ್ಷ ಅಮೆರಿಕನ್ ಡಾಲರ್ ಬಂಡವಾಳ ಹೂಡುವುದಾಗಿ ವರ್ಲ್ಡ್‌ಸ್ಪೇಸ್ ಕಾರ್ಪೊರೇಷನ್ನಿನ ಅಧಿಕಾರಿಯಾಬ್ಬರು ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಮರ, ನಾವು ಹೂಡಲಿರುವ ಬಂಡವಾಳ ಅದಕ್ಕೂ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದರು. ಆದರೆ, ಇಂತಿಷ್ಟೇ ಮೊತ್ತವನ್ನು ಹೂಡಲಿದ್ದೇವೆ ಎಂದು ಹೇಳಲು ನಿರಾಕರಿಸಿದರು.
ಈಗಾಗಲೇ ಬಿಪಿಎಲ್ ಲಿಮಿಟೆಡ್ ಜೊತೆ ಒಡಂಬಡಿಕೆ ಮಾಡಿಕೊಂಡಿರುವ ವರ್ಲ್ಡ್‌ಸ್ಪೇಸ್, ಗುರುವಾರ ಬೆಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಿ.ಕೆ.ರಂಗಸ್ವಾಮಿ ಹಾಗೂ ಕಂಪನಿಯ ಭಾರತದ ನಿರ್ದೇಶಕ ಎಂ.ಸೆಬಾಸ್ಟಿಯನ್ ಸಹಿ ಹಾಕುವ ಮೂಲಕ ಇನ್ನೊಂದು ಒಪ್ಪಂದ ಮಾಡಿಕೊಂಡಿತು. ಒಡಂಬಡಿಕೆಗೆ ಸಹಿ ಹಾಕಿದ ಸಂದರ್ಭದಲ್ಲಿ ರಾಜ್ಯ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿ ಕುಲಸಚಿವ ಕೆ.ಸಿದ್ಧಪ್ಪ ಹಾಗೂ ವರ್ಲ್ಡ್‌ಸ್ಪೇಸ್ ಕಾರ್ಯಕಾರಿ ಉಪಾಧ್ಯಕ್ಷ ಎಂ.ಜಿ.ಚಂದ್ರಶೇಖರ್ ಹಾಜರಿದ್ದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications