ಕಡಲ ಕೊರೆತದ ವಿರುದ್ಧ ಹೂಡಬೇಕಿದೆ ಅಂತಿಮ ಯುದ್ಧ -ವೀರಪ್ಪ ಮೊಯ್ಲಿ
ಮಂಗಳೂರು : ರಾಜ್ಯದ ಕರಾವಳಿಯಲ್ಲಿ ಸಂಭವಿಸುತ್ತಿರುವ ಕಡಲ ಕೊರೆತ ತಡೆಗಟ್ಟಲು ರಚನಾತ್ಮಕ ಯೋಜನೆಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ರೀಜನಲ್ ಇಂಜಿನಿಯರಿಂಗ್ ಕಾಲೇಜಿನ ಆನ್ವಯಿಕ ಯಂತ್ರಶಾಸ್ತ್ರ ವಿಭಾಗವು ಆಯೋಜಿಸಿದ್ದ ಕಡಲ ಕೊರೆತದ ಬಗೆಗಿನ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಭವಿಷ್ಯದ ದೃಷ್ಠಿಯಿಂದ ಪ್ರಸ್ತುತ ನಿರ್ಮಿಸಲು ಉದ್ದೇಶಿಸಲಾಗಿರುವ ತಾತ್ಕಾಲಿಕ ತಡೆಗೋಡೆಯನ್ನು ಶಾಶ್ವತವಾಗಿ ಉಳಿಯುವಂತೆ ಪುನರ್‌ನಿರ್ಮಿಸುವ ಅಗತ್ಯವಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಮಗ್ರ ದೃಷ್ಠಿಕೋನದ ಕೊರೆತೆಯಿಂದಾಗಿ ಹೆಚ್ಚು ಹಣ ಖರ್ಚಾಗುತ್ತಿದೆ. ಅಲ್ಲದೆ ಪ್ರತಿ ವರ್ಷವೂ ಸ್ಥಳೀಯರ ಜನಜೀವನಕ್ಕೆ ತೊಡಕಾಗುತ್ತಿದೆ ಎಂದರು.
ಕಡಲ ಕೊರೆತದ ಭಯದಿಂದ ಸ್ಥಳೀಯರನ್ನು ದೂರವಿಡುವ ಸಲುವಾಗಿಯಾದರೂ ಸಮಗ್ರ ಹಾಗೂ ಶಾಶ್ವತ ಯೋಜನೆಯಾಂದನ್ನು ರೂಪಿಸುವ ಜರೂರು ಇದೆ. ಸರಕಾರ ಬಿಡುಗಡೆ ಮಾಡಿರುವ ಹಣದ ಮಿತಿಯಲ್ಲಿ ಉತ್ತಮ ಪರಿಹಾರೋಪಾಯ ಕಂಡು ಕೊಳ್ಳಲು ಸ್ಪಷ್ಟ ಗುರಿಯಾಂದಿಗೆ ಉತ್ತಮ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗಿದೆ.
ಕಡಲ ಕೊರೆತ ತಡೆಗಟ್ಟುವ ರಚನಾತ್ಮಕ ಯೋಜನೆ ರೂಪಿಸುವಲ್ಲಿ ವಿಜ್ಞಾನಿಗಳು, ತಂತ್ರಪ್ರವೀಣರು, ಯೋಜನೆಯ ನಿರ್ವಹಣಕಾರರು ಮತ್ತು ಇಂಜಿನಿಯರ್‌ಗಳು ಒಟ್ಟಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಮೊಯ್ಲಿ ಕರೆ ನೀಡಿದರು. ಅವರ ಪ್ರಕಾರ, ಭೂತಂತ್ರಜ್ಞಾನ ಅಧ್ಯಯನವನ್ನು ಕೈಗೆತ್ತಿಕೊಳ್ಳುವ ಮೂಲಕ ಕಡಲ ಕೊರೆತ ಎಂಬ ಸಂಕೀರ್ಣ ಸಮಸ್ಯೆಯನ್ನು ನಿಭಾಯಿಸುವ ಹೊಣೆ ರಾಜ್ಯದ ಮೇಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications