ಕಾವೇರಿ ನೀರು ಹಂಚಿಕೆ: ಶನಿವಾರ ತಮಿಳುನಾಡು ಸರ್ವಪಕ್ಷ ಸಭೆ
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಗುರುವಾರ ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳಲು ತಮಿಳುನಾಡು ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಶನಿವಾರ ಕರೆದಿದೆ.
ಕರ್ನಾಟಕದಿಂದ ನೀರು ಬಿಡುಗಡೆಯ ಕುರಿತಂತೆ ಗುರುವಾರದ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲಾಗಲಿಲ್ಲ . ಇದರಿಂದಾಗಿ ರಾಜ್ಯದ ಮುಂದಿನ ಹೆಜ್ಜೆಯನ್ನು ಶನಿವಾರದ ಸರ್ವಪಕ್ಷ ಸಭೆಯಲ್ಲಿ ನಿರ್ಣಯಿಸಲಾಗುವುದು ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕಂದಾಯ ಸಚಿವ ಎನ್.ದಳವಾಯಿ ಸುಂದರಂ ಹೇಳಿದರು.
ಪ್ರಸ್ತುತ ಮೆಟ್ಟೂರು ಜಲಾಶಯದಲ್ಲಿರುವ ನೀರಿನ ಸಂಗ್ರಹ ಇನ್ನು 9 ದಿನಗಳಿಗೆ ಮಾತ್ರ ಸಾಲುತ್ತದೆ. ಮಧ್ಯಂತರ ಆದೇಶದ ಪ್ರಕಾರ ಸೆಪ್ಟಂಬರ್ 6 ರ ಹೊತ್ತಿಗೆ ಕರ್ನಾಟಕ 113.93 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು . ಆದರೆ, ಈವರೆಗೆ ಕರ್ನಾಟಕ ಬಿಡುಗಡೆ ಮಾಡಿರುವುದು 63.20 ಟಿಎಂಸಿ ನೀರು ಮಾತ್ರ ಎಂದು ಸುಂದರಂ ಹೇಳಿದರು.
3.9 ಲಕ್ಷ ಎಕರೆ ಪ್ರದೇಶದಲ್ಲಿರುವ ಕುರುವೈ ಬೆಳೆಗೆ ನೀರಿನ ಅಗತ್ಯವಿದ್ದು , ರಾಜ್ಯದ ರೈತರ ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಶನಿವಾರದ ಸರ್ವಪಕ್ಷ ಸಭೆ ಕರೆದಿರುವುದಾಗಿ ಸುಂದರಂ ತಿಳಿಸಿದರು.
(ಪಿಟಿಐ)
ವಾರ್ತಾ ಸಂಚಯ:
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications