ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚರ್ಚೆ ನಡೆಸಿ ಗಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಸೋನಿಯಾ ಕರೆ

By Staff
|
Google Oneindia Kannada News

ಬೆಳಗಾವಿ : ಚರ್ಚೆ ನಡೆಸಿ ಗಡಿ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಇಲ್ಲಿ ಕರೆ ನೀಡಿದ್ದಾರೆ.

ಪರಸ್ಪರ ಮಾತುಕತೆಯ ಮೂಲಕ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಈ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಲು ಸಾಧ್ಯ ಎಂದ ಅವರು, ತಾವು ಮಹಾರಾಷ್ಟ್ರ - ಕರ್ನಾಟಕ ಗಡಿ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿರುವ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ತಾವು ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥ ಪಡಿಸಲು ಮಧ್ಯಪ್ರವೇಶಿಸುವುದಾಗಿ ಪತ್ರಿಕೆಗಳಲ್ಲಿ ಬಂದಿರುವ ವರದಿ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋನಿಯಾ ತಿಳಿಸಿದರು. ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಪುನಾ ಮಾತುಕತೆಗೆ ಪ್ರಧಾನಿ ಕರೆದಿದ್ದಾರಂತೆ ಎಂದು ಪತ್ರಕರ್ತರು ಕೇಳಿದಾಗ ಈ ಪ್ರಶ್ನೆಯನ್ನು ನೀವು ವಾಜಪೇಯಿ ಅವರನ್ನು ಕೇಳಿ ಎಂದು ಅವರು ಉತ್ತರಿಸಿದರು.

ಗಡಿ ವಿಷಯ ಬಹು ಸೂಕ್ಷ್ಮ ವಿಚಾರ, ಇದರಲ್ಲಿ ಮೂರನೆಯವರ ಮಧ್ಯಪ್ರವೇಶ ಸಲ್ಲ. ಇದು ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಷಯ. ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಪರಸ್ಪರ ಸೌಹಾರ್ದ ಮಾತುಕತೆಯಿಂದ ಮಾತ್ರ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮೂರು ದಶಕಗಳಲ್ಲೇ ಅತ್ಯಂತ ಭೀಕರವಾದ ಬರದಿಂದ ತತ್ತರಿಸಿರುವ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಅವರು ಬಿಜಾಪುರ, ಜಮಖಂಡಿ, ಹೊರಟ್ಟಿ ಮೊದಲಾದ ಸ್ಥಳಗಳಿಗೆ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿ, ರೈತರೊಂದಿಗೆ ಮಾತುಕತೆ ನಡೆಸುವರು. ರೈತರ ಸಮಸ್ಯೆಗಳನ್ನು ಆಲಿಸುವರು.

ದೆಹಲಿಗೆ ಮರಳಿದ ಬಳಿಕ ಕರ್ನಾಟಕದ ಬರ ಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ನೀಡಿ, ಕರ್ನಾಟಕಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಸೋನಿಯಾ ಒತ್ತಾಯಿಸುವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X